alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಭವನ ಉದ್ಯಾನ ನಿರ್ವಹಣೆಗೆ ವೆಚ್ಚವಾಗಿರುವುದೆಷ್ಟು ಗೊತ್ತಾ?

ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ ಉದ್ಯಾನ ನಿರ್ವಹಣೆ ವೆಚ್ಚದ ಕುರಿತು ಕರ್ನಾಟಕದ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಮಾಹಿತಿ ಪಡೆದಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ 12.70 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಉದ್ಯಾನ ನಿರ್ವಹಣೆಗೆ 12.70 ಕೋಟಿ ರೂ. ವೆಚ್ಚವಾಗಿದ್ದರೆ, ಯಂತ್ರೋಪಕರಣಗಳ ಖರೀದಿಗಾಗಿ 1.46 ಕೋಟಿ ರೂ. ಹಾಗೂ ಕೆಲಸಗಾರರ ಸಂಬಳಕ್ಕಾಗಿ ಪ್ರತಿವರ್ಷ ಅಂದಾಜು 8.64 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ.

ಇಷ್ಟೊಂದು ಹಣ ವೆಚ್ಚ ಮಾಡಿ ಉದ್ಯಾನ ನಿರ್ವಹಣೆ ಮಾಡುವ ಅವಶ್ಯಕತೆ ಇದೆಯೇ ಎಂದು ಕೇಳಿರುವ ಭೀಮಪ್ಪ ಗಡಾದ, ಇದರಿಂದ ಸಾರ್ವಜನಿಕರಿಗಾಗುತ್ತಿರುವ ಪ್ರಯೋಜನವಾದರೂ ಏನು ಎಂದು ಪ್ರಶ್ನಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...