alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್….ಉಗ್ರಗಾಮಿಗಳ ಪಟ್ಟಿಯಲ್ಲಿ ಭಗತ್ ಸಿಂಗ್ ಹೆಸರು !

ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಭಾರತ ಸರ್ಕಾರ ಇದುವರೆಗೂ ಹುತಾತ್ಮರ ಸ್ಥಾನಮಾನವನ್ನೇ ಕೊಟ್ಟಿಲ್ಲ. ದುರಂತ ಅಂದ್ರೆ ಈ ಮೂವರ ಹೆಸರನ್ನು ಉಗ್ರಗಾಮಿಗಳ ಪಟ್ಟಿಯಲ್ಲಿ ನಮೂದಿಸಲಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟೊರಿಕಲ್ ರಿಸರ್ಚ್ ಈ ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಸಮಿತಿಯ ಅಧ್ಯಕ್ಷರನ್ನು ಕೂಡ ಕೇಂದ್ರ ಸರ್ಕಾರವೇ ನೇಮಕ ಮಾಡುತ್ತದೆ ಅನ್ನೋದನ್ನು ಇಲ್ಲಿ ಸ್ಮರಿಸಲೇಬೇಕು. ಭಗತ್ ಸಿಂಗ್, ಸುಖದೇವ್ ಹಾಗೂ ರಾಜಗುರು ದೇಶಕ್ಕಾಗಿ ಮಾಡಿದ ತ್ಯಾಗ ಯುವಜನತೆಗೆ ಪ್ರೇರಣೆಯಾಗಬಲ್ಲದು.

ಅವರಿಗೆ ಹುತಾತ್ಮರೆಂಬ ಗೌರವ ನೀಡುವುದು ಸರ್ಕಾರದ ಕರ್ತವ್ಯ. ಆದ್ರೆ ಅವರನ್ನು ಉಗ್ರಗಾಮಿಗಳ ಪಟ್ಟಿಗೆ ಸೇರಿಸಿರುವುದು ಆಘಾತಕಾರಿ ಸಂಗತಿ. ಜಮ್ಮು ಮೂಲದ ರೋಹಿತ್ ಚೌಧರಿ ಎಂಬುವವರು ಸಲ್ಲಿಸಿದ್ದ ಆರ್ ಟಿ ಐ ಅರ್ಜಿ ವಿಚಾರಣೆ ವೇಳೆ ಈ ವಿಷಯ ಬಹಿರಂಗವಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...