alex Certify
ಕನ್ನಡ ದುನಿಯಾ       Mobile App
       

Kannada Duniya

ಟಿವಿ ಸಂದರ್ಶನದಲ್ಲಿ ತಡವರಿಸಿದ ಟಾಪರ್

bihar-exam_650x400_71496320981ಕಳೆದ ವರ್ಷ ನಡೆದ ಬಿಹಾರ 12 ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಕಲಾ ವಿಭಾಗದ ಟಾಪರ್ ಆಗಿದ್ದ ರೂಬಿ ರಾಯ್, ಟಿವಿ ಸಂದರ್ಶನದ ವೇಳೆ ಪೊಲಿಟಿಕಲ್ ಸೈನ್ಸ್ ಕುರಿತು ಕೇಳಲಾದ ಪ್ರಶ್ನೆಗೆ ಅದು ಅಡುಗೆಗೆ ಸಂಬಂಧಪಟ್ಟ ವಿಷಯ ಎಂದು ಹೇಳಿ ನಗೆಪಾಟಲಿಗೀಡಾಗಿದ್ದಳು.

ಸಂದರ್ಶನದ ವೇಳೆ ಆಕೆ ನೀಡಿದ ಯಡವಟ್ಟು ಉತ್ತರಗಳ ಕಾರಣಕ್ಕೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ನಡೆದ ತನಿಖೆಯಲ್ಲಿ ಇದು ದೃಢಪಟ್ಟಿದ್ದು, ರೂಬಿ ರಾಯ್ ಸೇರಿದಂತೆ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಂಡಿದ್ದ ಹಲವರು ಜೈಲಿಗೂ ಹೋಗುವಂತಾಗಿತ್ತು.

ಈ ಬಾರಿ ಬಿಹಾರದ 12 ನೇ ತರಗತಿ ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ಕ್ರಮ ಅನುಸರಿಸಿದ್ದು, ಶೇ.64 ಮಂದಿ ಅನುತ್ತೀರ್ಣರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿ ಎದುರು ಪ್ರತಿಭಟನೆ ನಡೆಸಿರುವ ಘಟನೆಯೂ ನಡೆದಿದೆ.

ಈ ಮಧ್ಯೆ ಈ ಬಾರಿಯ ಪರೀಕ್ಷಾ ಫಲಿತಾಂಶದಲ್ಲಿ ಟಾಪರ್ ಆಗಿರುವ ಗಣೇಶ್ ಕುಮಾರ್ ಎಂಬ ವಿದ್ಯಾರ್ಥಿಯ ಫಲಿತಾಂಶದ ಕುರಿತು ಅನುಮಾನ ವ್ಯಕ್ತವಾಗುತ್ತಿದೆ. ಟಿವಿ ಸಂದರ್ಶನದಲ್ಲಿ ಕೇಳಲಾದ ಹಲವು ಪ್ರಶ್ನೆಗಳಿಗೆ ಈತ ತಪ್ಪುತಪ್ಪಾಗಿ ಉತ್ತರ ನೀಡಿದ್ದಾನೆ. ಆದರೆ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಶಿಕ್ಷಣ ಸಚಿವ ಅಶೋಕ್ ಚೌಧರಿ, ಪರೀಕ್ಷೆ ಹಾಗೂ ಮೌಲ್ಯಮಾಪನವನ್ನು ಕಟ್ಟುನಿಟ್ಟಾಗಿ ನಡೆಸಲಾಗಿದೆ. ಸುಮ್ಮನೆ ಮಾಧ್ಯಮಗಳು ಇಲ್ಲಸಲ್ಲದ್ದನ್ನು ಸೃಷ್ಟಿಸುತ್ತಿವೆ. ಅಷ್ಟಕ್ಕೂ ಸಂದರ್ಶನ ನಡೆಸಿದ ವರದಿಗಾರ ಎಲ್ಲ ವಿಷಯಗಳನ್ನು ತಿಳಿದುಕೊಂಡಿರುವ ಪಂಡಿತನೇ ಎಂದು ಪ್ರಶ್ನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...