alex Certify
ಕನ್ನಡ ದುನಿಯಾ       Mobile App
       

Kannada Duniya

ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಇರುಮುಡಿ ಹೊತ್ತು ಬಂದಿದ್ದ ಮಹಿಳೆ ಅರೆಸ್ಟ್

ಎಲ್ಲ ವಯೋಮಾನದ ಮಹಿಳೆಯರಿಗೆ ಶಬರಿಮಲೆ ದೇವಾಲಯ ಪ್ರವೇಶಿಸಲು ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಇದರ ಮಧ್ಯೆ ಶುಕ್ರವಾರದಂದು ದೇವಾಲಯದ ಬಾಗಿಲು ತೆರೆದಿದ್ದು ಮೊದಲ ದಿನ ಪೂಜೆ ಮಾತ್ರ ನೆರವೇರಿದೆ. ಶನಿವಾರದಂದು ಭಕ್ತರಿಗೆ ದರ್ಶನ ಪ್ರಾರಂಭವಾಗಿದ್ದು, ಇದರ ಮಧ್ಯೆ ಹಿಂದು ಐಕ್ಯ ವೇದಿ ಸಂಘಟನೆಯ ರಾಜ್ಯಾಧ್ಯಕ್ಷೆ ಕೆ.ಪಿ. ಶಶಿಕಲಾ ಎಂಬವರು, ತಮಗೆ 50 ವರ್ಷದ ಮೇಲಾಗಿದೆ ಎಂದು ಇರುಮುಡಿ ಹೊತ್ತು ಅಯ್ಯಪ್ಪನ ದರ್ಶನಕ್ಕೆ ಬಂದಿದ್ದರು.

ಆದರೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ತಡೆಯುವ ನಿಟ್ಟಿನಲ್ಲಿ ಶಬರಿಮಲೆ ಕರ್ಮ ಸಮಿತಿ ಹನ್ನೆರಡು ತಾಸುಗಳ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿತ್ತು. ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ಈಗ ಶಶಿಕಲಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...