alex Certify
ಕನ್ನಡ ದುನಿಯಾ       Mobile App
       

Kannada Duniya

ಅಯ್ಯಪ್ಪನ ಸನ್ನಿಧಾನದಲ್ಲಿ ಮಕರ ‘ಜ್ಯೋತಿ’ ಕಣ್ತುಂಬಿಕೊಂಡ ಭಕ್ತರು

ಕೇರಳದ ಪಟ್ಟನಂತಿಟ್ಟು ಜಿಲ್ಲೆಯಲ್ಲಿರುವ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲದಲ್ಲಿ ಇಂದು ಮಕರ ಸಂಕ್ರಾಂತಿ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಮಾಡಿ, ಪೂಜೆ ಸಲ್ಲಿಸಲಾಯಿತು.

ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದ ಭಕ್ತರು, ಮಕರ ಜ್ಯೋತಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲ ಮಣಿಕಂಠನ ಸನ್ನಿಧಿಯಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಪೊನ್ನಂಬಲಮೇಡುವಿನಲ್ಲಿ 3 ಬಾರಿ ಮಕರ ಜ್ಯೋತಿ ದರ್ಶನವಾಯಿತು.

ಅಯ್ಯಪ್ಪನ ಸನ್ನಿಧಾನದಲ್ಲಿದ್ದ ಭಕ್ತರು ಮಕರ ಜ್ಯೋತಿಯ ದರ್ಶನ ಪಡೆಯುತ್ತಲೇ ಭಾವಪರವಶರಾಗಿ ಅಯ್ಯಪ್ಪನ ಧ್ಯಾನದಲ್ಲಿ ಮೈಮರೆತಿದ್ದಾರೆ. ದೇವಾಲಯದ ಆಡಳಿತ ಮಂಡಳಿ ವತಿಯಿಂದ ಹಾಗೂ ಸ್ಥಳೀಯ ಪೊಲೀಸರು ಭಾರೀ ಭದ್ರತೆ ಕೈಗೊಂಡಿದ್ದಾರೆ. ಪ್ರತಿ ಬಾರಿಗಿಂತ ಈ ಬಾರಿ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...