alex Certify
ಕನ್ನಡ ದುನಿಯಾ       Mobile App
       

Kannada Duniya

ಗೊಂದಲದ ಮಧ್ಯೆ ಇಂದು ಸಂಜೆ ತೆರೆಯಲಿದೆ ಶಬರಿಮಲೆ ದೇಗುಲದ ಬಾಗಿಲು

ಎಲ್ಲ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಅನುವು ಮಾಡಿಕೊಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ, ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಈ ಗೊಂದಲಗಳ ಮಧ್ಯೆ ಇಂದು ಸಂಜೆಯಿಂದ ಶಬರಿಮಲೆ ದೇಗುಲದ ಬಾಗಿಲು ತೆರೆಯಲಿದೆ.

ಮೊದಲ ದಿನ ದೇಗುಲದಲ್ಲಿ ಪೂಜೆ ಮಾತ್ರ ನೆರವೇರಲಿದ್ದು, ಭಕ್ತರಿಗೆ ಪ್ರವೇಶವಿರುವುದಿಲ್ಲ. ಶನಿವಾರದಿಂದ ಭಕ್ತರು ಸ್ವಾಮಿ ಅಯ್ಯಪ್ಪನ ದರ್ಶನ ಪಡೆಯಬಹುದಾಗಿದೆ. ಡಿಸೆಂಬರ್ 27 ರಿಂದ ಮೂರು ದಿನಗಳ ಕಾಲ ದೇಗುಲ ಬಾಗಿಲು ಮುಚ್ಚಲಿದ್ದು, ಬಳಿಕ ಡಿಸೆಂಬರ್ 30 ರಿಂದ 2019 ರ ಜನವರಿ 20 ರ ವರೆಗೆ ಬಾಗಿಲು ತೆರೆಯಲಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರದಂದು ಸರ್ವಪಕ್ಷ ಸಭೆ ನಡೆಸಿದರಾದರೂ ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ದೇಗುಲ ಪ್ರವೇಶಕ್ಕೆ ಆನ್ಲೈನ್ ಮೂಲಕ 500 ಕ್ಕೂ ಅಧಿಕ ಮಹಿಳೆಯರು ಅರ್ಜಿ ಸಲ್ಲಿಸಿದ್ದು, ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...