alex Certify
ಕನ್ನಡ ದುನಿಯಾ       Mobile App
       

Kannada Duniya

ಶಬರಿಮಲೆಯಲ್ಲಿ ಸಂಕ್ರಾಂತಿ ಸಂಭ್ರಮ

ಶಬರಿಮಲೆ: ಪ್ರಸಿದ್ಧ ಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯಲ್ಲಿ ಇಂದು ಮಕರ ಜ್ಯೋತಿಯ ದರ್ಶನವಾಗಲಿದೆ. ದೇಶದ ವಿವಿಧ ಭಾಗಗಳಿಂದ ಸ್ವಾಮಿಯ ಹಾಗೂ ಜ್ಯೋತಿಯ ದರ್ಶನ ಪಡೆಯಲು ಲಕ್ಷಾಂತರ ಮಂದಿ ಅಯ್ಯಪ್ಪ ಮಾಲಾಧಾರಿಗಳು ಆಗಮಿಸಿದ್ದಾರೆ.

ಪಂದಳ ರಾಜರು ನೀಡಿದ ಆಭರಣಗಳನ್ನು ಅಯ್ಯಪ್ಪನಿಗೆ ಹಾಕಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಗುತ್ತದೆ. ಈಗಾಗಲೇ ವಿಶೇಷ ಪೂಜಾ ಕಾರ್ಯಗಳು ಆರಂಭವಾಗಿವೆ. ಮಕರ ಸಂಕ್ರಾಂತಿ ಪೂಜೆ, ಪಡಿ ಪೂಜೆ, ದೀಪಾರಾಧನೆ, ಗಣಪತಿ ಪೂಜೆ, ಶುದ್ಧಿ ಪೂಜೆ ಮೊದಲಾದ ಕಾರ್ಯಗಳು ನಡೆಯಲಿವೆ.

ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದೇವಾಲಯದ ಆಡಳಿತ ಮಂಡಳಿ, ಪೊಲೀಸರು ಭದ್ರತೆ ಸೇರಿ ಎಲ್ಲಾ ಕ್ರಮ ಕೈಗೊಂಡಿದ್ದಾರೆ.

ಜ್ಯೋತಿಯ ದರ್ಶನಕ್ಕೆ ಭಾರೀ ಸಂಖ್ಯೆಯ ಭಕ್ತರು ಆಗಮಿಸಿದ್ದು, ಸಂಜೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿಯ ದರ್ಶನ ಪಡೆಯಲು ಕಾತರರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...