alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಕನಸು ಭಗ್ನ : ಶಶಿಕಲಾಗೆ ಜೈಲು

sasik-sc-2

ನವದೆಹಲಿ: ತಮಿಳುನಾಡು ಮಾತ್ರವಲ್ಲ, ಇಡೀ ದೇಶದ ಗಮನ ಸೆಳೆದಿದ್ದ ಶಶಿಕಲಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಹೊರ ಬಿದ್ದಿದೆ.

ಶಶಿಕಲಾ ಅಪರಾಧಿ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಅವರು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಹೇಳಿದ್ದು, ಅವರು ಜೈಲಿಗೆ ಹೋಗಬೇಕಾಗಿದೆ.

4 ವರ್ಷ ಜೈಲು ಹಾಗೂ 10 ಕೋಟಿ ರೂಪಾಯಿ ದಂಡ ವಿದಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. 10 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಹೇಳಲಾಗಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಪ್ರಮುಖ ಆರೋಪಿಯಾಗಿದ್ದು, ಶಶಿಕಲಾ ಸಹ ಆರೋಪಿಯಾಗಿದ್ದರು.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜಯಲಲಿತಾ ಹಾಗೂ ಶಶಿಕಲಾ ಅವರನ್ನು ದೋಷಮುಕ್ತಗೊಳಿಸಿ, ಕರ್ನಾಟಕ ಹೈಕೋರ್ಟ್ 2015 ರಲ್ಲಿ ಆದೇಶ ನೀಡಿತ್ತು.

ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ 2016 ರ ಜೂನ್ 7 ರಂದು ತೀರ್ಪು ಕಾಯ್ದಿರಿಸಿತ್ತು.

66.65 ಕೋಟಿ ರೂಪಾಯಿ ಮೊತ್ತದ ಅಕ್ರಮ ಆಸ್ತಿ ಪ್ರಕರಣದಲ್ಲಿ ಶಶಿಕಲಾ ಅವರ ಸಂಬಂಧಿಯಾಗಿರುವ ಇಳವರಸಿ ಮತ್ತು ಸುಧಾಕರನ್ ಅವರೂ ಸಹ ಆರೋಪಿಗಳಾಗಿದ್ದರು.

ಕರ್ನಾಟಕ ಸರ್ಕಾರದ ಪರವಾಗಿ ವಾದಿಸಿದ್ದ ಹಿರಿಯ ವಕೀಲರಾದ ಬಿ.ವಿ. ಆಚಾರ್ಯ ಅವರು, ಘೋಷಿತ ಆದಾಯಕ್ಕಿಂತ ಶೇ. 76.7 ರಷ್ಟು ಹೆಚ್ಚು ಅಕ್ರಮ ಆಸ್ತಿಯನ್ನು ಜಯಲಲಿತಾ ಸಂಪಾದಿಸಿದ್ದಾರೆ ಎಂದು ವಾದಿಸಿದ್ದರು.

ನ್ಯಾಯಮೂರ್ತಿಗಳಾದ ಪಿ.ಸಿ.ಘೋಷ್ ಮತ್ತು ಅಮಿತವ್ ರಾಯ್ ಅವರನ್ನೊಳಗೊಂಡ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ.

ಜಯಲಲಿತಾ ನಿಧನದ ಬಳಿಕ ಎ.ಐ.ಎ.ಡಿ.ಎಂ.ಕೆಯಲ್ಲಿ ನಾಯಕತ್ವಕ್ಕಾಗಿ ಶಶಿಕಲಾ ಮತ್ತು ಪನ್ನೀರ್ ಸೆಲ್ವಂ ಅವರ ನಡುವೆ ಪೈಪೋಟಿ ಉಂಟಾಗಿತ್ತು. ಈ ತೀರ್ಪಿನೊಂದಿಗೆ ಗೊಂದಲಗಳಿಗೆ ಕೊಂಚ ತೆರೆ ಬಿದ್ದಿದೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...