alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರೀಯ-ರಾಜ್ಯ ಹೆದ್ದಾರಿಯಲ್ಲಿ ಸಿಗಲ್ಲ ಮದ್ಯ

supreme-court

ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬಳಿ ಇರುವ ಮದ್ಯದ ಅಂಗಡಿಗಳಿಗೆ ಬರೆ ನೀಡಿದೆ. ಸುರಕ್ಷಿತ ಸಂಚಾರಕ್ಕೆ ಒತ್ತು ನೀಡುವ ಹಿನ್ನೆಲೆಯಲ್ಲಿ ಹೆದ್ದಾರಿ ಬಳಿ ಇರುವ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಟಿಎಸ್ ಠಾಕೂರ್ ಈ ಆದೇಶ ನೀಡಿದ್ದಾರೆ. ಏಪ್ರಿಲ್ ಒಂದರೊಳಗೆ ಎಲ್ಲ ಶಾಪ್ ಗಳು ಬಾಗಿಲು ಮುಚ್ಚಬೇಕೆಂದು ಸುಪ್ರೀಂ ಸೂಚಿಸಿದೆ. ಲೈಸೆನ್ಸ್ ಇರುವವರೆಗೆ ಅಂಗಡಿ ತೆರೆಯಬಹುದು. ಆದ್ರೆ ಮತ್ತೆ ಲೈಸೆನ್ಸ್ ನವೀಕರಣ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಕಳೆದ ಬುಧವಾರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ವೈನ್ ಶಾಪ್ ಬಾಗಿಲು ಮುಚ್ಚುವುದರಿಂದ ಕುಡಿದು ವಾಹನ ಚಲಾಯಿಸುವವರ ಸಂಖ್ಯೆ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟಿತ್ತು. ಅರೈವ್ ಸೇಫ್ ಎಂಬ ಎನ್ಜಿಓ ಸಂಸ್ಥೆ ಶಾಪ್ ಗಳನ್ನು ಬ್ಯಾನ್ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...