alex Certify
ಕನ್ನಡ ದುನಿಯಾ       Mobile App
       

Kannada Duniya

“ಕೇಂದ್ರೀಯ ವಿದ್ಯಾಲಯದ ಪ್ರಾರ್ಥನೆಯಲ್ಲಿ ಹಿಂದುತ್ವದ ಪ್ರಚಾರ?’’

ಕೇಂದ್ರೀಯ ವಿದ್ಯಾಲಯಗಳಲ್ಲಿ ನಡೆಯುವ ಪ್ರಾರ್ಥನೆ ವಿಚಾರಕ್ಕೆ ಸಂಬಂದಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಮಹತ್ವದ ಪ್ರಶ್ನೆಯೊಂದನ್ನು ಕೇಳಿದೆ. ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರಾರ್ಥನೆ ಮೂಲಕ ಹಿಂದುತ್ವವನ್ನು ಪ್ರಚಾರ ಮಾಡಲಾಗ್ತಿದೆಯಾ ಎಂದು ಸುಪ್ರೀಂ ಕೇಂದ್ರಕ್ಕೆ ಪ್ರಶ್ನೆ ಕೇಳಿದೆ.

ಶಿಕ್ಷಕರೊಬ್ಬರು ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಅರ್ಜಿ ಸಲ್ಲಿಸಿದ್ದರು. ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಹಿಂದುತ್ವವನ್ನು ಪ್ರಚಾರ ಮಾಡುವುದು ಸರಿಯೇ ಎಂದು ಅವರು ಪ್ರಶ್ನೆ ಮಾಡಿದ್ದರು. ಅರ್ಜಿಯನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ಕೇಂದ್ರೀಯ ವಿದ್ಯಾಲಯಕ್ಕೆ ಪ್ರಶ್ನೆ ಕೇಳಿದೆ.

ಬೆಳಗಿನ ಪ್ರಾರ್ಥನೆ ವೇಳೆ ಕೈ ಮುಗಿದು ಇಲ್ಲವೆ ಕಣ್ಣು ಮುಚ್ಚಿ ಪ್ರಾರ್ಥನೆ ಮಾಡಬೇಕಾ ಎಂದು ಸುಪ್ರೀಂ ಪ್ರಶ್ನೆ ಮಾಡಿದೆ. ನ್ಯಾಯಮೂರ್ತಿ ಪಾಲಿ ನಾರಿಮನ್ ನೇತೃತ್ವದ ಪೀಠ ಇದೊಂದು ಮಹತ್ವದ ವಿಷ್ಯವೆಂದು ವಿಚಾರಣೆ ವೇಳೆ ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...