alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್.ಸಿ./ಎಸ್.ಟಿ. ಕಾಯ್ದೆ: ಅಮಾಯಕರ ರಕ್ಷಣೆಗೆ ಕ್ರಮ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಎಸ್.ಸಿ./ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಪರಿಷ್ಕರಣೆ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಎಸ್.ಸಿ./ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ, ದೂರುದಾರರ ಬಗ್ಗೆ ನಮ್ಮ ವಿರೋಧವಿಲ್ಲ. ಅಮಾಯಕರ ರಕ್ಷಣೆಯ ಉದ್ದೇಶ ನಮ್ಮದಾಗಿದೆ. ಎಸ್.ಸಿ./ಎಸ್.ಟಿ. ಕಾಯ್ದೆಯ ಅಡಿಯಲ್ಲಿ ಅಮಾಯಕರನ್ನು ಹೆದರಿಸಿ, ದಂಡನೆ ಮಾಡುವುದು ಸಲ್ಲದು. ಯಾವ ವ್ಯಕ್ತಿ ಕೂಡ ತನ್ನ ಹಕ್ಕಿನಿಂದ ವಂಚಿತವಾಗುವುದನ್ನು ನ್ಯಾಯಾಲಯ ಬಯಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾರ್ಚ್ 20 ರಂದು ಸುಪ್ರೀಂ ಕೋರ್ಟ್, ಎಸ್.ಸಿ./ಎಸ್.ಟಿ. ಕಾಯ್ದೆಯಡಿ ದೂರು ದಾಖಲಾದ ಕೂಡಲೇ ಆರೋಪಿಗಳನ್ನು ಬಂಧಿಸಬಾರದು. ಸೂಕ್ತವಾದ ಪ್ರಾಧಿಕಾರದ ಅನುಮತಿ ಪಡೆದ ಬಳಿಕ ಸರ್ಕಾರಿ ಅಧಿಕಾರಿಗಳನ್ನು ಬಂಧಿಸಬಹುದಾಗಿದೆ ಎಂದು ತೀರ್ಪು ನೀಡಿತ್ತು.

ಇದನ್ನು ವಿರೋಧಿಸಿ ದಲಿತ ಸಂಘಟನೆಗಳಿಂದ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಅನೇಕ ರಾಜ್ಯಗಳಲ್ಲಿ ಹಿಂಸಾಚಾರ ನಡೆದು 10 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದೇಶವನ್ನು ಮರು ಪರಿಶೀಲಿಸಲು ಕೇಂದ್ರ ಸರ್ಕಾರ ಮನವಿ ಮಾಡಿದ್ದು, 10 ದಿನದ ಬಳಿಕ ಕೂಲಂಕಷವಾಗಿ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...