alex Certify
ಕನ್ನಡ ದುನಿಯಾ       Mobile App
       

Kannada Duniya

ಕಿಕ್ ಬ್ಯಾಕ್ ಆರೋಪ: ಮೋದಿಗೆ ರಿಲೀಫ್

mo-pm

ನವದೆಹಲಿ: ಸಹರಾ, ಬಿರ್ಲಾ ಕಂಪನಿಗಳಿಂದ ಕಿಕ್ ಬ್ಯಾಕ್ ಪಡೆದಿರುವ, ಆರೋಪ ಹೊತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಿಲೀಫ್ ಸಿಕ್ಕಿದೆ.

ಮೋದಿ ಕಿಕ್ ಬ್ಯಾಕ್ ಪಡೆದಿರುವ ಬಗ್ಗೆ, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು.

ಈ ಕುರಿತಾಗಿ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಎಸ್.ಐ.ಟಿ. ತನಿಖೆಗೆ ಆದೇಶಿಸಬೇಕೆಂದು ಮನವಿ ಮಾಡಿದ್ದರು.

ಸುಪ್ರೀಂ ಕೋರ್ಟ್ ನಲ್ಲಿ ಸುದೀರ್ಘ 5 ಗಂಟೆಗಳ ಕಾಲ ಈ ಪ್ರಕರಣದ ವಿಚಾರಣೆ ನಡೆದಿದೆ. ಡೈರಿಯಲ್ಲಿರುವ ಅಂಶಗಳು ನಂಬಲರ್ಹವಲ್ಲವಾದ ಕಾರಣ, ಪಿ.ಐ.ಎಲ್. ಅನ್ನು ವಜಾ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಮೋದಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, 9 ಬಾರಿ ಸಹರಾ ಕಂಪನಿಯಿಂದ ಹಣ ಪಡೆದುಕೊಂಡಿದ್ದಾರೆ ಎಂದು ಡೈರಿಯಲ್ಲಿ ದಾಖಲಾಗಿರುವ ಬಗ್ಗೆ ರಾಹುಲ್ ಗಾಂಧಿ ಆರೋಪ ಮಾಡಿದ್ದರು.

ಇಂದು ವಿಚಾರಣೆಯ ಸಂದರ್ಭದಲ್ಲಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಇಂತಹ ದಾಖಲೆಗಳನ್ನು ಸಾಕ್ಷ್ಯಾಧಾರವೆಂದು ಪರಿಗಣಿಸದೇ ಅರ್ಜಿಯನ್ನು ವಜಾ ಮಾಡಬೇಕೆಂದು ಮನವಿ ಮಾಡಿದ್ದಾರೆ.ತನಿಖೆಗೆ ಆದೇಶ ನೀಡಲು ನಿರ್ಣಾಯಕವಾದ ಸಾಕ್ಷ್ಯಾಧಾರಗಳು ಇಲ್ಲವಾದ ಕಾರಣ ಅರ್ಜಿಯನ್ನು ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Jobs by neuvoo.co.in

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...