alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ‘ಸುಪ್ರೀಂ’ ನಕಾರ

ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಬದಲಿಗೆ ಈ ಹಿಂದಿನಂತೆ ಬ್ಯಾಲೆಟ್ ಪೇಪರ್ ಬಳಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.

ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಬಳಕೆಯಿಂದ ನ್ಯಾಯಯುತ ಚುನಾವಣೆ ನಡೆಯುತ್ತಿಲ್ಲ. ಇದು ದುರ್ಬಳಕೆಯಾಗುತ್ತಿರುವ ಕಾರಣ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವುದು ಸೂಕ್ತ ಎಂಬುದು ಅರ್ಜಿದಾರರ ವಾದವಾಗಿತ್ತು.

ಈ ಸಾರ್ವಜನಿಕ ಹಿತಾಸಕ್ತಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಯಾವುದೇ ಒಂದು ಬದಲಾವಣೆಯನ್ನು ಜಾರಿಗೆ ತಂದಾಗ ಅಪಸ್ವರ ಕೇಳಿ ಬರುವುದು ಸಹಜ. ಆದರೆ ಇವಿಎಂ ಬಳಕೆ ತೃಪ್ತಿದಾಯಕವಾಗಿದೆ ಎಂದು ಹೇಳಿದೆ.

ಈ ಹಿಂದಿನಿಂದಲೂ ಪ್ರತಿಪಕ್ಷಗಳು ಇವಿಎಂ ದುರ್ಬಳಕೆಯಾಗುತ್ತಿದೆ ಎಂಬ ಆರೋಪ ಮಾಡಿಕೊಂಡು ಬರುತ್ತಿದ್ದು, ಜೊತೆಗೆ ಮತದಾನದ ವೇಳೆ ತಾಂತ್ರಿಕ ದೋಷ ತಲೆದೋರುತ್ತಿರುವ ಕಾರಣ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗಕ್ಕೆ ಒತ್ತಾಯಿಸುತ್ತಿದ್ದು, ಸುಪ್ರೀಂ ಕೋರ್ಟ್ ಈಗ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಈ ವಾದಕ್ಕೆ ಹಿನ್ನಡೆಯಾದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...