alex Certify
ಕನ್ನಡ ದುನಿಯಾ       Mobile App
       

Kannada Duniya

ಪುಟ್ಟ ಮಕ್ಕಳ ಪ್ರಾಣ ಕಳೆದ ಮಹೇಂದ್ರ ಜೀಪ್

punjab2

ಸ್ಕೂಲ್ ಬಸ್ ಗೆ ಮಹೇಂದ್ರಾ ಜೀಪ್ ಡಿಕ್ಕಿಹೊಡೆದ ಪರಿಣಾಮ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಹೊಶಿಯಾರ್ಪುರ್ ನಲ್ಲಿ ನಡೆದಿದೆ. ಘಟನೆಯಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಗಾಪುರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೇಂಬ್ರಿಡ್ಜ್ ಶಾಲೆಯ ಬಸ್ ಗೆ ಮುಂದಿನಿಂದ ಬರ್ತಾ ಇದ್ದ ಮಹೇಂದ್ರ ಜೀಪ್ ಡಿಕ್ಕಿ ಹೊಡೆದಿದೆ. ದುರ್ಘಟನೆಗೆ ಮಹೇಂದ್ರ ಜೀಪ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗ್ತಾ ಇದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪಾಲಕರ ರೋಧನ ಮುಗಿಲು ಮುಟ್ಟಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...