alex Certify
ಕನ್ನಡ ದುನಿಯಾ       Mobile App
       

Kannada Duniya

ಇಷ್ಟೆಲ್ಲಾ ಆದ್ರೂ ಬುದ್ದಿ ಕಲ್ತಿಲ್ಲ ಜನ್ರು…!

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಈಗಾಗಲೇ ಹಲವಾರು ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆಗಳು ಮಾಧ್ಯಮಗಳಲ್ಲಿ ವರದಿಯಾಗಿದ್ದರೂ ಕೆಲವರು ಮಾತ್ರ ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಛತ್ತೀಸ್ಗಡದಲ್ಲಿ ಮತ್ತೊಂದು ಸೆಲ್ಫಿ ದುರಂತ ನಡೆದಿದ್ದು, ಈ ಪ್ರಕರಣದಲ್ಲಿ ಯುವಕ ಗಂಭೀರವಾಗಿ ಗಾಯಗೊಂಡರೂ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಛತ್ತೀಸ್ಗಡದ ಅಬಾನಪುರ ಕೋಲಾರ್ ಗ್ರಾಮದ ಯುವಕ ಗಜೇಂದ್ರ ಎಂಬಾತ ಜಲಪಾತದ ತುದಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಆಯತಪ್ಪಿ ಬಿದ್ದಿದ್ದು, ಸುಮಾರು 50 ಅಡಿ ಮೇಲಿನಿಂದ ಕೆಳಕ್ಕೆ ಬಿದ್ದಿದ್ದಾನೆ.

ಯುವಕ ಮೇಲಿನಿಂದ ಕೆಳಕ್ಕೆ ಬೀಳುತ್ತಿರುವ ದೃಶ್ಯವನ್ನು ಪ್ರವಾಸಿಗರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...