alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲ್ಫಿ ಪ್ರಿಯರು ಓದಲೇಬೇಕಾದ ಸುದ್ದಿ

NEW DELHI, INDIA - JULY 9: People click selfie during the pleasant weather at CP, Center Park, on July 9, 2016 in New Delhi, India. Sudden rains brought respite for people in capital after a hot and humid afternoon. (Photo by Saumya Khandelwal/Hindustan Times via Getty Images)

ಪ್ರಾಣವನ್ನು ಪಣಕ್ಕಿಟ್ಟು ಸೆಲ್ಫಿ ತೆಗೆಯುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ. ಸೆಲ್ಫಿ ಗೀಳಿಗೆ ಅನೇಕರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಒಂದು ಮಹತ್ವದ ಕೆಲಸಕ್ಕೆ ಕೈ ಹಾಕಿದೆ. ಜೀವದ ಆಸೆ ಬಿಟ್ಟು ಸೆಲ್ಫಿ ತೆಗೆಯುವ ಹವ್ಯಾಸವನ್ನು ತಡೆಗಟ್ಟುವ ಪ್ರಯತ್ನಕ್ಕೆ ಮುಂದಾಗಿದೆ.

ದೇಶದ ಎಲ್ಲ ಪ್ರವಾಸಿ ಸ್ಥಳಗಳಲ್ಲಿ ಸೆಲ್ಫಿ ಬಗ್ಗೆ ಬೋರ್ಡ್ ಹಾಕುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಸೂಚನೆ ನೀಡಿದೆ. ಅಗತ್ಯವಿರುವ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳುವಂತೆ ಸಲಹೆ ನೀಡಿದೆ. ಭದ್ರತೆ ದೃಷ್ಟಿಯಿಂದ ಆಗಸ್ಟ್ 12ರಿಂದ 18ರವರೆಗೆ ರಾಷ್ಟ್ರೀಯ ಸ್ಮಾರಕಗಳ ಮುಂದೆ ಸೆಲ್ಫಿ ತೆಗೆಯುವುದನ್ನು ನಿಷೇಧಿಸಲಾಗಿದೆ. ಸ್ವಾತಂತ್ರ್ಯ ದಿನವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಆದೇಶ ನೀಡಿದೆ.

ಆಗಸ್ಟ್ 15ರ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ತಿದೆ. ದೇಶದ ವಿವಿಧೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜ ಹಾರಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭದ್ರತೆಯನ್ನೂ ಒಂದು ಪಟ್ಟು ಹೆಚ್ಚಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...