alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಕೆಲಸದ ಆಮಿಷವೊಡ್ಡಿ ಹಿರಿಯ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

ಕೆಲಸದ ಆಮಿಷ ಒಡ್ಡಿ ಮಹಿಳಾ ಕಾನ್ಸ್ಟೇಬಲ್ ಒಬ್ಬರ ಮಗಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ಔರಂಗಾಬಾದ್ ನಲ್ಲಿ ನಡೆದಿದೆ. ಈ ಸಂಬಂಧ ಯುವತಿ ಔರಂಗಾಬಾದ್ ಎಂಐಡಿಸಿ ಸಿಡ್ಕೊ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಎಂಐಡಿಡಿ ಸಿಡ್ಕೊ ವ್ಯಾಪ್ತಿಯ ಫೇಸ್ 2 ಡಿಸಿಪಿ ರಾಹುಲ್ ಶ್ರೀ ರಾಮ್ ಮೇಲೆ ಅತ್ಯಾಚಾರದ ದೂರು ದಾಖಲಾಗಿದೆ. ಅತ್ಯಾಚಾರಕ್ಕೆ ಒಳಗಾದ 23 ವರ್ಷದ ಯುವತಿಯ ತಾಯಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಆಕೆಯ ಮೇಲೆ ಡಿಸಿಪಿ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಅಂತ ದೂರು ನೀಡಲಾಗಿದೆ. ರಾಹುಲ್ ಶ್ರೀರಾಮ್ ರಜೆಯ ಮೇಲೆ ತೆರಳಿದ ಸಂದರ್ಭದಲ್ಲಿ ದೌರ್ಜನ್ಯಕ್ಕೊಳಗಾದ ಯುವತಿ ದೂರು ನೀಡಿದ್ದಾಳೆ. ದೂರು ಸ್ವೀಕರಿಸಿರುವ ಪೊಲೀಸರು ಪ್ರಕರಣದ ತನಿಖೆಯನ್ನ ಆರಂಭಿಸಿದ್ದಾರೆ. ಹಲವು ಸೆಕ್ಷನ್ ಗಳ ಅಡಿಯಲ್ಲಿ ರಾಹುಲ್ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...