alex Certify
ಕನ್ನಡ ದುನಿಯಾ       Mobile App
       

Kannada Duniya

ಕೃಷಿಕರಿಗೆ ಸಿಹಿ ಸುದ್ದಿ ನೀಡಿದ ಸಿ.ಎಂ.

ಹೈದರಾಬಾದ್: ಕೃಷಿ ವಲಯಕ್ಕೆ ಹೆಚ್ಚಿನ ಅನುದಾನ ಹಂಚಿಕೆ ಮಾಡುವ ಜೊತೆಗೆ, ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ತಿಳಿಸಿದ್ದಾರೆ.

ಹೈದರಾಬಾದ್ ನ ಪ್ರಗತಿ ಭವನದಲ್ಲಿ ಅಧಿಕಾರಿಗಳೊಂದಿಗೆ ಕೃಷಿ ವಿಷಯಗಳ ಕುರಿತಾಗಿ ಸಮಗ್ರ ಪರಾಮರ್ಶೆ ನಡೆಸಿದ ಸಚಿವರು ಈ ಮಾಹಿತಿ ನೀಡಿದ್ದಾರೆ.

ರೈತರು ಖುಷಿಯಾಗಿದ್ದರೆ, ರಾಜ್ಯವು ಖುಷಿಯಾಗಲಿದೆ. ಕೃಷಿ ಕ್ಷೇತ್ರದ ಬೆಳವಣಿಗೆಯಿಂದ ಗ್ರಾಮೀಣ ಆರ್ಥಿಕತೆಗೆ ಒಳಿತಾಗಲಿದೆ. ರೈತರು ಉತ್ಪಾದಿಸುವ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಅನೇಕ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ಸಣ್ಣ ನೀರಾವರಿ ಯೋಜನೆಗಳ ನವೀಕರಣ ಕಾರ್ಯ ನಡೆದಿದೆ. 24 ಗಂಟೆಗಳ ಕಾಲ ನಿರಂತರವಾಗಿ ಗುಣಮಟ್ಟದ ವಿದ್ಯುತ್ ಅನ್ನು ಉಚಿತವಾಗಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಗುಣಮಟ್ಟದ ಬೀಜ, ರಸಗೊಬ್ಬರ ಪೂರೈಕೆ, ಕೃಷಿ ವಿಶ್ವವಿದ್ಯಾಲಯಗಳ ಬಲವರ್ಧನೆ, ಭೂಮಿ ದಾಖಲೆಗಳ ನವೀಕರಣ ಮಾಡುವ ಮೂಲಕ ಭೂ ಮಾಲೀಕತ್ವ ಸ್ಪಷ್ಟಪಡಿವುದು ಸೇರಿ ಹಲವು ಮಾಹಿತಿಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ.

ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಪ್ರತ್ಯೇಕ ಬಜೆಟ್ ಮಂಡಿಸುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...