alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ

ನವದೆಹಲಿ: ಕಾವೇರಿದ್ದ ಗುಜರಾತ್ ಚುನಾವಣಾ ಕಾವು ಮುಗಿದಿದೆ. ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.

ತ್ರಿವಳಿ ತಲಾಖ್ ಗೆ ಸಂಬಂಧಿಸಿದ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣಾ ಮಸೂದೆ, ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಮಸೂದೆ ಸೇರಿ ಸುಮಾರು 25 ಮಸೂದೆಗಳಿಗೆ ಅಂಗೀಕಾರ ಪಡೆಯಲು ಸರ್ಕಾರ ಮುಂದಾಗಿದೆ.

ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ಕಚೇರಿಯಲ್ಲಿ ವಿರೋಧ ಪಕ್ಷಗಳ ಮುಖಂಡರು ಸಭೆ ನಡೆಸಿ ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಕುರಿತು ಚರ್ಚೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ನೀಡಿದ ಹೇಳಿಕೆ, ವಿಳಂಬವಾಗಿ ಚಳಿಗಾಲದ ಅಧಿವೇಶನ ನಡೆಸುತ್ತಿರುವ ಕುರಿತಾಗಿ ಪ್ರತಿಪಕ್ಷಗಳು ಕಾವೇರಿದ ಚರ್ಚೆಗೆ ಮುಂದಾಗಿವೆ.

3 ವಾರ ಸಂಸತ್ ಅಧಿವೇಶನ ನಡೆಯುವ ಸಾಧ್ಯತೆ ಇದೆ. ಇದೇ ವೇಳೆ ಕ್ರಿಸ್ ಮಸ್ ಪ್ರಯುಕ್ತ 4 ದಿನ ವಿರಾಮ ನೀಡಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...