alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆಗೂ ಮುನ್ನವೇ ಬಿಜೆಪಿಗೆ ಬಿಗ್ ‘ಶಾಕ್’: ಪಕ್ಷ ತೊರೆದು ‘ಕೈ’ ಹಿಡಿದ ಸಂಸದ

ಮುಂಬರುವ ಲೋಕಸಭಾ ಚುನಾವಣೆಯ ಜೊತೆಗೆ ಈಗ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿರುವಾಗಲೇ ರಾಜಸ್ಥಾನದಲ್ಲಿ ಸಂಸದರೊಬ್ಬರು ಶಾಕ್ ನೀಡಿದ್ದಾರೆ.

ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿರುವಾಗಲೇ ಸಂಸದ ಹಾಗೂ ಮೀನಾ ಸಮುದಾಯದ ಪ್ರಭಾವಿ ಮುಖಂಡ ಹರೀಶ್ ಮೀನಾ, ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಅನುಮಾನವೆಂಬ ವಿಚಾರ, ಚುನಾವಣಾಪೂರ್ವ ಸಮೀಕ್ಷೆಗಳಲ್ಲಿ ವ್ಯಕ್ತವಾಗಿದ್ದು, ಇದರ ಮಧ್ಯೆ ನಡೆದಿರುವ ಈ ಬೆಳವಣಿಗೆ ಪಕ್ಷದ ನಾಯಕರನ್ನು ಕಂಗೆಡುವಂತೆ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...