alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಿದ್ದು’ ವಿರುದ್ಧದ ಕೇಸ್ ಗೆ ಮರುಜೀವ

ಎರಡು ದಶಕಗಳ ಹಿಂದಿನ ಅಪಘಾತ ಪ್ರಕರಣದ ಮರು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡುತ್ತಿದ್ದಂತೆ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿದ್ದುಗೆ ಸಂಕಷ್ಟ ಎದುರಾಗಿದೆ.

ರಸ್ತೆ ಅಪಘಾತ ಪ್ರಕರಣವೊಂದರ ಮರು‌ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದರಿಂದ ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ ನ ಹಾಲಿ ಸಚಿವ ಸಿದ್ದು ಕಟಕಟೆಯಲ್ಲಿ‌ ನಿಲ್ಲಬೇಕಿದೆ.

1988ರಲ್ಲಿ ಸಿದ್ದು ತನ್ನ ಸ್ನೇಹಿತನೊಂದಿಗೆ ಕಾರ್ ಚಲಾಯಿಸುವಾಗ, ವ್ಯಕ್ತಿಯೊಬ್ಬನಿಗೆ ಗುದ್ದಿದ್ದರಿಂದ ವ್ಯಕ್ತಿ ಸಾವನ್ನಪ್ಪಿದ. ಇದೇ ಪ್ರಕರಣದಲ್ಲಿ 1998 ರಲ್ಲಿ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಆದರೆ ಕಳೆದ ವರ್ಷ ಹೈಕೋರ್ಟ್, ಮೃತ ವ್ಯಕ್ತಿ ಅಪಘಾತದಿಂದಲೇ ಮೃತರಾಗಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲದೇ‌ ಇರುವುದರಿಂದ, ಸಿದ್ದು ಅವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿತ್ತು.

ಆದರೆ ಇದೀಗ ಮೃತರ ಸಂಬಂಧಿಗಳು, ಈ ಹಿಂದೆ ಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರಿಂದ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...