alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ 7 ಮಂದಿ ನಕ್ಸಲರು ಸಾವು

naxals

ನಾರಾಯಣಪುರ: ನಕ್ಸಲ್ ನಿಗ್ರಹದಳ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 7 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ಛತ್ತೀಸ್ ಗಡದ ನಾರಾಯಣಪುರ ಜಿಲ್ಲೆಯ ಪುಷ್ಪಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ.

ಈ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ನಕ್ಸಲರು ಗುಂಡಿನ ದಾಳಿ ಮಾಡಿದ್ದಾರೆ.

ನಂತರ ಹೆಚ್ಚಿನ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿದ್ದು, ಎನ್ ಕೌಂಟರ್ ನಲ್ಲಿ 7 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ನಕ್ಸಲರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...