alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ದಿನ ವಿಧವೆಯರಾದ 7 ಮಹಿಳೆಯರು, ಅನಾಥರಾದ್ರು 29 ಮಕ್ಕಳು

download

ಹರಿಯಾಣದ ಮರುತ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಟ್ರಕ್ ಹಾಗೂ ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 7 ಮಂದಿ ಸಾವನ್ನಪ್ಪಿದ್ದು, 29 ಮಕ್ಕಳು ತಮ್ಮ ತಂದೆಯನ್ನು ಕಳೆದುಕೊಂಡಿದ್ದಾರೆ. ಒಂದೇ ಬಾರಿ 7 ಮಹಿಳೆಯರು ಪತಿಯನ್ನು ಕಳೆದುಕೊಂಡು ವಿಧವೆಯಾಗಿದ್ದಾರೆ.

ದಾದ್ರಿಯ ಮಹಾರಾಣದಲ್ಲಿ ಎಲ್ಲರ ಅಂತ್ಯಸಂಸ್ಕಾರ ಮಾಡಲಾಗಿದೆ.  ಈ ಅಪಘಾತದಿಂದ ಕುಟುಂಬಕ್ಕೆ ತುಂಬಲಾಗದ ನಷ್ಟವಾಗಿದೆ. ಒಂದೇ ಬಾರಿ 7 ಮಹಿಳೆಯರು ಗಂಡನನ್ನು ಕಳೆದುಕೊಂಡಿದ್ದು, ಕುಟುಂಬ ಬೀದಿಗೆ ಬಿದ್ದಿದೆ. ಮೃತರೆಲ್ಲರ ವಯಸ್ಸು 20ರಿಂದ 40 ವರ್ಷದೊಳಗಿದೆ.

ಎಲ್ಲ ಮೃತರಿಗೂ ಮೂರು, ನಾಲ್ಕು, ಐದು ಮಕ್ಕಳಿವೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ ಒಂದೇ ವೈದ್ಯರು 7 ಶವಗಳ ಮರಣೋತ್ತರ ಪರೀಕ್ಷೆ ಮಾಡಿದ್ದಾರೆ. ಇದು ದುಃಖ ತರುವಂತ ವಿಷಯವೆಂದು ವೈದ್ಯರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...