alex Certify BIG NEWS: ಮೈಸೂರು ಮುಕ್ತ ವಿಶ್ವವಿದ್ಯಾಲಯ ಕುಲಪತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಆಡಿಯೋ ಬಿಡುಗಡೆಗೆ ಬಂದ ಸಿಂಡಿಕೇಟ್ ಸದಸ್ಯರ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು ಮುಕ್ತ ವಿಶ್ವವಿದ್ಯಾಲಯ ಕುಲಪತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಆಡಿಯೋ ಬಿಡುಗಡೆಗೆ ಬಂದ ಸಿಂಡಿಕೇಟ್ ಸದಸ್ಯರ ಮೇಲೆ ಹಲ್ಲೆ

ಮೈಸೂರು: ಮೈಸೂರು ಮುಕ್ತ ವಿಶ್ವವಿದ್ಯಾಲಯ ಕುಲಪತಿ ವಿದ್ಯಾಶಂಕರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಕುಲಪತಿ ವಿರುದ್ಧ ಸಿಂಡಿಕೇಟ್ ಸದಸ್ಯರೇ ತಿರುಗಿಬಿದ್ದಿರುವ ಘಟನೆ ನಡೆದಿದೆ.

ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಕುಲಪತಿ ವಿದ್ಯಾಶಂಕರ್ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆಕೆಯೊಂದಿಗೆ ಮಾತನಾಡಿರುವ ಆಡಿಯೋ ಕೂಡ ವೈರಲ್ ಆಗಿದೆ. ಕುಲಪತಿಯ ಆಡಿಯೋ ಬಿಡುಗಡೆಗೆ ಎಂದು ಮೈಸೂರು ಪತ್ರಕರ್ತರ ಭವನಕ್ಕೆ ಆಗಮಿಸಿದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಮಹದೇವ್ ಹಾಗೂ ಮತ್ತಿತರರ ಮೇಲೆ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಮುಕ್ತ ವಿವಿ ರಿಜಿನಲ್ ಡೈರೆಕ್ಟರ್ ಸುಧಾಕರ್ ಹೊಸಳ್ಳಿ ಡಾ.ಮಹದೇವ್ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾರೆ. ಸುದ್ದಿಗೋಷ್ಠಿ ವೇಳೆಯೇ ಗಲಾಟೆ ನಡೆದಿದ್ದು, ಘರ್ಷಣೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೂ ಸುಧಾಕರ್ ಹಾಗೂ ಇತರರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...