alex Certify
ಕನ್ನಡ ದುನಿಯಾ       Mobile App
       

Kannada Duniya

ಶಬರಿಮಲೆ ದೇಗುಲ ಪ್ರವೇಶಕ್ಕಾಗಿ ಹೋರಾಟ ನಡೆಸಿದ್ದ ಮಹಿಳೆಯರಿಗೆ ಸಿಹಿ ಸುದ್ದಿ

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಭಕ್ತಿಗೆ ಮಹಿಳೆಯರು ಹಾಗೂ ಪುರುಷರೆಂಬ ಭೇದವಿರುವುದಿಲ್ಲ ಎಂಬ ಅಭಿಪ್ರಾಯಪಡಿಸಿದ್ದಾರೆ.

ಮಹಿಳೆಯರಿಗೆ ದೇಗುಲ ಪ್ರವೇಶ ನಿಷೇಧ ಎಂಬುದೇ ಅಸಂವಿಧಾನಿಕ ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿಗಳು, ಧಾರ್ಮಿಕ ಕೇಂದ್ರಗಳು ಸಾರ್ವಜನಿಕ ಸ್ಥಳಗಳಾಗಿದ್ದು, ಎಲ್ಲರಿಗೂ ಮುಕ್ತವಾಗಿರಬೇಕು ಎಂದಿದ್ದಾರೆ.

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದಿನಿಂದಲೂ ವಾದ-ವಿವಾದ ನಡೆದುಕೊಂಡು ಬಂದಿದ್ದು, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದೀಗ ಮುಖ್ಯನ್ಯಾಯಮೂರ್ತಿಗಳು ಮಹಿಳೆಯರಿಗೆ ಪ್ರವೇಶ ಕುರಿತಂತೆ ಪರವಾದ ಅಭಿಪ್ರಾಯ ವ್ಯಕ್ತಪಡಿಸಿರುವ ಕಾರಣ ಇನ್ನು ಮುಂದೆ ಎಲ್ಲರಿಗೂ ಪ್ರವೇಶ ಸಿಗುವ ನಿರೀಕ್ಷೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...