alex Certify
ಕನ್ನಡ ದುನಿಯಾ       Mobile App
       

Kannada Duniya

ನಿಮಗೆ ನಾಚಿಕೆಯಾಗಬೇಕು ಕೆಸಿಆರ್ ಅಂದ್ರು ದಿಗ್ವಿಜಯ್ ಸಿಂಗ್

digvijay singhತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್, ಎರಡನೇ ವರ್ಷದ ರಾಜ್ಯ ಸಂಸ್ಥಾಪನಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸುತ್ತಿರುವುದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ತೀವ್ರವಾಗಿ ಖಂಡಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ದಿಗ್ವಿಜಯ್ ಸಿಂಗ್, ತೆಲಂಗಾಣ ಜನತೆ ಭೀಕರ ಬರದಿಂದ ತತ್ತರಿಸುತ್ತಿದ್ದಾರೆ. ಬಿಸಿಲಿನ ಹೊಡೆತಕ್ಕೆ ನೂರಾರು ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಇರುವಾಗ ನೂರಾರು ಕೋಟಿ ರೂ. ವೆಚ್ಚ ಮಾಡಿ ಜಾಹೀರಾತು ಪ್ರಕಟಿಸುವ ಔಚಿತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಸಮಾರಂಭ ಮಾಡುತ್ತಿರುವ ನಿಮಗೆ ನಾಚಿಕೆಯಾಗಬೇಕು ಕೆಸಿಆರ್ ಎಂದಿದ್ದಾರೆ ದಿಗ್ವಿಜಯ್ ಸಿಂಗ್.

ಅಲ್ಲದೇ ಈ ಎರಡು ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಕುಟುಂಬ ಮಾತ್ರ ಅಭಿವೃದ್ದಿ ಹೊಂದಿದೆ ಎಂದು ಕುಟುಕಿರುವ ದಿಗ್ವಿಜಯ್ ಸಿಂಗ್, ಬಡತನದಿಂದ ಜನ ಸಾಯುತ್ತಿದ್ದರೂ ಚಂದ್ರಶೇಖರ ರಾವ್ ಇದ್ಯಾವುದನ್ನು ಲೆಕ್ಕಿಸುತ್ತಿಲ್ಲವೆಂದು ಟೀಕಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...