alex Certify
ಕನ್ನಡ ದುನಿಯಾ       Mobile App
       

Kannada Duniya

ಮೂವರು ಕಾಂಗ್ರೆಸ್ ಶಾಸಕರ ರಾಜೀನಾಮೆ

congre-s-guh

ಅಹಮದಾಬಾದ್: ಹಿರಿಯ ನಾಯಕ ಶಂಕರ್ ಸಿಂಗ್ ವಘೆಲಾ ಕಾಂಗ್ರೆಸ್ ನಿಂದ ದೂರವಾದ ಬೆನ್ನಲ್ಲೇ, ಮೂವರು ಶಾಸಕರು ಪಕ್ಷದಿಂದ ಹೊರ ನಡೆದಿದ್ದಾರೆ.

ಕಾಂಗ್ರೆಸ್ ಪಕ್ಷದ ಮೂವರು ಶಾಸಕರು ರಾಜೀನಾಮೆ ನೀಡಿದ್ದು, ಬಿ.ಜೆ.ಪಿ. ಸೇರಿದ್ದಾರೆ. ರಾಜ್ಯಸಭೆ ಚುನಾವಣೆಯ ವೇಳೆ ಪಕ್ಷದ ಶಾಸಕರು ಹೊರ ನಡೆದಿರುವುದು ಕಾಂಗ್ರೆಸ್ ಗೆ ಹಿನ್ನಡೆಯಾದಂತಾಗಿದೆ.

ಬಲವಂತ್ ಸಿಂಗ್ ರಜಪೂತ್, ತೇಜಶ್ರೀ ಪಟೇಲ್, ಪಿ.ಐ. ಪಟೇಲ್ ಅವರು ರಾಜೀನಾಮೆ ನೀಡಿದ್ದಾರೆ. ಎ.ಐ.ಸಿ.ಸಿ. ಅಧ್ಷಕ್ಷೆ ಸೋನಿಯಾ ಗಾಂಧಿಯವರ ರಾಜಕೀಯ ಸಲಹೆಗಾರ ಅಹ್ಮದ್ ಪಟೇಲ್ ರಾಜ್ಯಸಭೆ ಚುನಾವಣೆಯಲ್ಲಿ ಗುಜರಾತ್ ನಿಂದ ಅಭ್ಯರ್ಥಿಯಾಗಿದ್ದು ಅವರ ಗೆಲುವನ್ನು ತಡೆಯಲು ಶಂಕರ್ ಸಿಂಗ್ ವಘೆಲಾರ ಹತ್ತಿರದ ಸಂಬಂಧಿ ಬಲವಂತ್ ಸಿಂಗ್ ಪ್ರಯತ್ನ ನಡೆಸಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ತೊರೆದು ಬಿ.ಜೆ.ಪಿ. ಸೇರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...