alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಸದ ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು

ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳದಂತೆ ಸೂಚಿಸಿರುವ ಜೊತೆಗೆ ಹಲವು ಷರತ್ತುಗಳನ್ನು ವಿಧಿಸಿ ಶಶಿ ತರೂರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದ್ದು, ಒಂದು ಲಕ್ಷ ರೂ. ಶ್ಯೂರಿಟಿ ಪಡೆಯಲಾಗಿದೆ.

ಪತ್ನಿ ಸುನಂದಾ ಪುಷ್ಕರ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪವನ್ನು ಶಶಿ ತರೂರ್ ಎದುರಿಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...