alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಶಿಲ್ಪಾಶೆಟ್ಟಿಗೆ ಪಿತೃ ವಿಯೋಗ

shilpa-kk

ಮುಂಬೈ: ಬಾಲಿವುಡ್ ಖ್ಯಾತ ನಟಿ ಶಿಲ್ಪಾಶೆಟ್ಟಿ ಅವರ ತಂದೆ ಸುರೇಂದ್ರ ಶೆಟ್ಟಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಪತ್ನಿ ಸುನಂದಾ ಶೆಟ್ಟಿ, ಮಕ್ಕಳಾದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. ಸುರೇಂದ್ರ ಶೆಟ್ಟಿ ಅವರು, ಮುಂಬೈನಲ್ಲಿ ಬ್ಯುಸಿನೆಸ್ ಮೆನ್ ಆಗಿದ್ದರು. ಮೂಲತಃ ಮಂಗಳೂರು ಸಮೀಪದ ಕೌಡೂರಿನವರಾಗಿದ್ದ ಸುರೇಂದ್ರ ಶೆಟ್ಟಿ ಮುಂಬೈನಲ್ಲಿಯೇ ನೆಲೆಸಿದ್ದರು. ವರ್ಷಕ್ಕೊಮ್ಮೆ ತವರಿಗೆ ಹೋಗಿ ಬರುತ್ತಿದ್ದರು.

ಮುಂಬೈನ ಮನೆಯಲ್ಲಿ ಅವರಿಗೆ ತೀವ್ರ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬುಧವಾರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...