alex Certify
ಕನ್ನಡ ದುನಿಯಾ       Mobile App
       

Kannada Duniya

ಮಾನಸ ಸರೋವರ ಯಾತ್ರೆಗೆ ಹೊರಟ ರಾಹುಲ್‌

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆ.31 ರ ವೇಳೆಗೆ ಕೈಲಾಸ ಹಾಗೂ ಮಾನಸ ಸರೋವರ ಯಾತ್ರೆ ಮಾಡಲಿದ್ದಾರೆ. ಕರ್ನಾಟಕ ಚುನಾವಣೆ ಬಳಿಕ ಯಾತ್ರೆ ಹೊರಡುವ ಬಗ್ಗೆ ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದರು. ಚೀನಾ ಮಾರ್ಗವಾಗಿ ಕೈಲಾಸ ಹಾಗೂ ಮಾನಸ ಸರೋವರಕ್ಕೆ ರಾಹುಲ್‌ ಗಾಂಧಿ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ದೆಹಲಿಯಿಂದ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತಾಂತ್ರಿಕ ದೋಷದಿಂದ ವಿಮಾನ ಕೆಲವಾರು ಅಡಿ ಕೆಳಕ್ಕೆ ಇಳಿದಿತ್ತು. ಕರ್ನಾಟಕದಲ್ಲಿ ವಿಮಾನ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ ಬಳಿಕ, ಕೈಲಾಸ ಮಾನಸ ಸರೋವರ ಯಾತ್ರೆ ಮಾಡುವುದಾಗಿ ನಿರ್ಧರಿಸಿದ್ದರು. ಅದರಂತೆ ಇದೀಗ ದಿನ ನಿಗದಿ ಮಾಡಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

2019ರ ಲೋಕಸಭೆ ಚುನಾವಣೆ ಹಾಗೂ ವಿವಿಧ ರಾಜ್ಯಗಳ ಚುನಾವಣೆಗೂ ಮುನ್ನ ಕೈಲಾಸ ಮಾನಸ ಸರೋವರ ಯಾತ್ರೆ ಮಾಡಲು ರಾಹುಲ್‌ ನಿರ್ಧರಿಸಿದ್ದಾರೆ. ಶಿವಭಕ್ತ ಎಂದು ರಾಹುಲ್‌ ಹೇಳಿಕೊಳ್ಳುತ್ತಾರೆ. ಹಿಂದಿರುಗಿದ ಬಳಿಕ ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಈ ಬಾರಿಯ ಕೈಲಾಸ ಯಾತ್ರೆ ಸೆ.8 ರ ವರೆಗೆ ಇರಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...