alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವರಾತ್ರಿಯಂದೇ ಭೀಕರ ಅಪಘಾತ, ಐವರ ಸಾವು

ಚಿತ್ತೂರು: ಶಿವರಾತ್ರಿ ಅಂಗವಾಗಿ ಶಿವನ ದರ್ಶನಕ್ಕೆ ಹೊರಟಿದ್ದ ಐವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಬಿ.ಎಸ್. ಕಂದ್ರಿಗ ಬಳಿ ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ 5 ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಪಶ್ಚಿಮ ಗೋದಾವರಿ ಜಿಲ್ಲೆಯ ಪಾಲಕೊಲ್ಲು ಗ್ರಾಮದ ರಾಮರಾವ್, ಕುಮಾರಿ, ಬಿಂದು, ಅನಂತ್ ಹಾಗೂ ಆಟೋ ಚಾಲಕ ವೆಂಕಟರಮಣ ಎಂದು ಗುರುತಿಸಲಾಗಿದೆ.

ಶಿವರಾತ್ರಿ ಪ್ರಯುಕ್ತ ಆಟೋದಲ್ಲಿ ಕಾಳಹಸ್ತಿಗೆ ಹೋಗುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...