alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಲ್ಲಿ ಬಾಲಕರಿಂದ ನಡೆದಿದೆ ಘೋರ ಕೃತ್ಯ

ನವದೆಹಲಿ: ಆಗ್ನೇಯ ದೆಹಲಿಯ ಮಥುರಾ ರಸ್ತೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಚಲಿಸುತ್ತಿದ್ದ ಬಸ್ ನಲ್ಲಿಯೇ 4 -5 ಮಂದಿ ಶಾಲಾ ವಿದ್ಯಾರ್ಥಿಗಳು ವ್ಯಕ್ತಿಯೊಬ್ಬನ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಶಾಲಾ ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿಗಳ ಗುಂಪು ತನ್ನ ಮೊಬೈಲ್ ಕದ್ದಿರುವುದಾಗಿ ಸುಮಾರು 25 ವರ್ಷ ವಯಸ್ಸಿನ ವ್ಯಕ್ತಿ ಆರೋಪಿಸಿದ್ದಾನೆ.

ಇದರಿಂದ ಆಕ್ರೋಶಗೊಂಡ ಮಕ್ಕಳು ಹರಿತವಾದ ಆಯುಧದಿಂದ ವ್ಯಕ್ತಿಯ ಕತ್ತು ಸೀಳಿ ಪರಾರಿಯಾಗಿದ್ದಾರೆ. ಲಜ್ಪತ್ ನಗರದಿಂದ ಕೊಲೆಗೀಡಾದ ವ್ಯಕ್ತಿ ಬಸ್ ಹತ್ತಿದ್ದು, ಆಶ್ರಮ್ ಚೌಕ್ ನಿಲ್ದಾಣದಲ್ಲಿ 13 -16 ವರ್ಷ ವಯಸ್ಸಿನ ಬಾಲಕರು ಬಸ್ ಹತ್ತಿದ್ದಾರೆ. ತಮ್ಮ ಮೊಬೈಲ್ ಕದ್ದಿದ್ದಾನೆ ಎಂದು ವ್ಯಕ್ತಿ ಆರೋಪಿಸಿದಾಗ, ಬಾಲಕರು ವ್ಯಕ್ತಿಯ ಕತ್ತು ಸೀಳಿ ಇಳಿದು ಹೋಗಿದ್ದಾರೆ.

ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಥುರಾ ರಸ್ತೆಯಲ್ಲಿರುವ ಸುಮಾರು 15 ಸರ್ಕಾರಿ ಶಾಲೆಗಳ ಮಕ್ಕಳನ್ನು ಗುರುತಿಸಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಮವಸ್ತ್ರದಲ್ಲಿದ್ದ ಬಾಲಕರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...