alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ರೋಡ್ ಷೋ ವೇಳೆ ಶೂ ತೂರಿದವನ ಅರೆಸ್ಟ್

show-thrown-at-rahul-gandhi-during-roadshowಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಾಂಗ್ರೆಸ್ ತಯಾರಿ ನಡೆಸುತ್ತಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದಲ್ಲಿ ನಿರಂತರವಾಗಿ ರ್ಯಾಲಿ ನಡೆಸುತ್ತಿದ್ದಾರೆ. ಸೋಮವಾರದಂದು ಸೀತಾಪುರ್ ನಲ್ಲಿ ರೋಡ್ ಷೋ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಅವರ ಮೇಲೆ ಶೂ ತೂರಿದ್ದಾನೆ.

ತೆರೆದ ವಾಹನದಲ್ಲಿ ರಾಹುಲ್ ಗಾಂಧಿ ಹೋಗುತ್ತಿದ್ದಾಗ ಹಿಂಬದಿಯಿಂದ ಶೂ ಎಸೆದಿದ್ದು, ಜೀಪಿನಲ್ಲಿದ್ದ ಮುಖಂಡರಿಗೆ ಶೂ ತಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಶೂ ಎಸೆದ ಅನೂಪ್ ಮಿಶ್ರಾ ಎಂಬಾತನನ್ನು ಪೊಲೀಸರು ಬಂಧಿಸಿದ್ದು, 60 ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಜನತೆಗಾಗಿ ಮಾಡಿದ್ದೇನು ಎಂದು ಆತ ಪ್ರಶ್ನಿಸಿದ್ದಾನೆ.

ಶೂ ಎಸೆದ ಘಟನೆ ಬಳಿಕವೂ ವಿಚಲಿತರಾಗದ ರಾಹುಲ್, ದಾರಿಯುದ್ದಕ್ಕೂ ನೆರೆದ ಸಾರ್ವಜನಿಕರಿಗೆ ಕೈ ಬೀಸುತ್ತಾ ಸಾಗಿದ್ದು, ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಬಿಜೆಪಿ ಹಾಗೂ ಆರ್.ಎಸ್.ಎಸ್. ದೇಶದಲ್ಲಿ ದ್ವೇಷವನ್ನು ಹರಡುತ್ತಿದ್ದರೆ ಕಾಂಗ್ರೆಸ್, ಜನರನ್ನು ಪ್ರೀತಿಯಿಂದ ಗೆಲ್ಲಲು ಹೊರಟಿದೆ ಎಂದಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ‘ಕಾಟ್ ಪೇ ಚರ್ಚಾ’ ಕಾರ್ಯಕ್ರಮ ನಡೆಸುತ್ತಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವಂತೆ ಮಾಡಲು ಶತಪ್ರಯತ್ನ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...