alex Certify
ಕನ್ನಡ ದುನಿಯಾ       Mobile App
       

Kannada Duniya

ಗುರುವಾಯೂರು ದೇವಾಲಯಕ್ಕೆ ಬೆದರಿಕೆ ಕರೆ

b-guruvayoor-temple

ಕೇರಳದ ಗುರುವಾಯೂರಿನಲ್ಲಿರುವ ಪ್ರಸಿದ್ಧ ಶ್ರೀಕೃಷ್ಣ ದೇವಾಲಯಕ್ಕೆ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಗುರುವಾಯೂರು ದೇವಾಲಯವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಅಂತಾ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯದ ಆಡಳಿತ ಮಂಡಳಿ ಭ್ರಷ್ಟಾಚಾರದಲ್ಲಿ ತೊಡಗಿದೆ ಅಂತಾ ಕರೆ ಮಾಡಿದ ವ್ಯಕ್ತಿ ಆರೋಪ ಮಾಡಿದ್ದಾನೆ. ದೇವಸ್ಥಾನ ಆಡಳಿತ ಮಂಡಳಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆದರಿಕೆ ಕರೆಯ ವಿವರವನ್ನು ಸಂಗ್ರಹಿಸುತ್ತಿದ್ದಾರೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ಕರೆತಂದು ಪರಿಶೀಲನೆ ನಡೆಸಲಾಗಿದೆ. ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.

ಗುರುವಾಯೂರು ಶ್ರೀಕೃಷ್ಣ ದೇವಾಲಯ ಕೇರಳದ ಪ್ರಸಿದ್ಧ ದೇವಸ್ಥಾನಗಳಲ್ಲೊಂದು. ಪ್ರತಿ ವರ್ಷ ಇಲ್ಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...