alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಶ್ರುತಿ ಹಾಸನ್ ಗೆ ಕರ್ನಾಟಕದ ವೈದ್ಯನ ಕಿರುಕುಳ

hasan-sr

ಚೆನ್ನೈ: ತಮಿಳು, ತೆಲುಗು ಸೇರಿದಂತೆ, ಹಲವು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ, ಖ್ಯಾತ ನಟಿ ಶ್ರುತಿ ಹಾಸನ್ ಅವರಿಗೆ ಕರ್ನಾಟಕದ ವೈದ್ಯನೊಬ್ಬ ಕಿರುಕುಳ ನೀಡಿದ್ದಾನೆ.

ಖ್ಯಾತ ನಟ ಕಮಲ್ ಹಾಸನ್ ಪುತ್ರಿಯಾಗಿರುವ ನಟಿ ಶ್ರುತಿ ಹಾಸನ್, ಚೆನ್ನೈನ ಸೈಬರ್ ಕ್ರೈಂ ಬ್ರಾಂಚ್ ಪೊಲೀಸರಿಗೆ ಸುದೀರ್ಘ 2 ಪುಟಗಳ ದೂರೊಂದನ್ನು ನೀಡಿದ್ದಾರೆ. ಅದರಲ್ಲಿ ತಮಗೆ ಕರ್ನಾಟಕದ ಹಾಸನ ಮೂಲದ ವೈದ್ಯ ಗುರುಪ್ರಸಾದ್ ಎಂಬಾತ ಕಿರುಕುಳ ನೀಡಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತಮಗೆ ಬೆದರಿಕೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಟ್ವಿಟರ್ ನಲ್ಲಿ ತಮ್ಮ ಖಾಸಗಿ ಬದುಕಿನ ಬಗ್ಗೆ ಕೀಳಾಗಿ ಮಾತಾಡಿ, ಬೆದರಿಕೆ ಹಾಕಿದ್ದಾರೆ. ಅಸಂಬದ್ಧವಾಗಿ ನಡೆದುಕೊಂಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಶ್ರುತಿ ಹಾಸನ್ ಚೆನ್ನೈ ಸೈಬರ್ ಕ್ರೈಂ ಬ್ರಾಂಚ್ ಪೊಲೀಸರಿಗೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...