alex Certify
ಕನ್ನಡ ದುನಿಯಾ       Mobile App
       

Kannada Duniya

ನದಿಗೆ ಉರುಳಿದ ಟ್ರಕ್, 21 ಮಂದಿ ದಾರುಣ ಸಾವು

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಸೋನ್ ನದಿಗೆ ಟ್ರಕ್ ಉರುಳಿ ಬಿದ್ದು, ಕನಿಷ್ಠ 21 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಂಭೀರವಾದ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದ್ದು, ಬಳಿಕ 70 ಅಡಿಗೂ ಅಧಿಕ ಆಳದ ನದಿಗೆ ಉರುಳಿದೆ. ಇದರಿಂದಾಗಿ ಹಲವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಲಾಗಿದೆ.

ಸಿಧಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಮದುವೆಗೆ ಸಿಂಗ್ರೋಲಿ ಜಿಲ್ಲೆಯಿಂದ ಟ್ರಕ್ ತೆರಳುತ್ತಿತ್ತು. ಸ್ಥಳಕ್ಕೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...