alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆ ಅಬ್ಬರಕ್ಕೆ ಮನೆ ಕುಸಿದು 6 ಮಂದಿ ಬಲಿ

ಕಳೆದ ಎರಡು ದಿನಗಳಲ್ಲಿ ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಶನಿವಾರ ಬೆಳಿಗ್ಗೆ ಸಹರಾನ್ಪುರದಲ್ಲಿ ಭಾರೀ ಮಳೆಗೆ ಮನೆಯೊಂದು ಕುಸಿದುಬಿದ್ದಿದೆ. ಘಟನೆಯಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ.

ಮೃತರಲ್ಲಿ ನಾಲ್ಕು ವರ್ಷದ ಬಾಲಕ ಸೇರಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ನಂತ್ರ ಸ್ಥಳಕ್ಕಾಗಮಿಸಿದ ರಕ್ಷಣಾ ಪಡೆ ಹಾಗೂ ಪೊಲೀಸ್ ರಕ್ಷಣಾ ಕಾರ್ಯ ನಡೆಸುತ್ತಿದೆ. 6 ಶವಗಳನ್ನು ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ.

ಸತತ 36 ಗಂಟೆಯಿಂದ ಮಳೆ ಸುರಿಯುತ್ತಿದ್ದು, ಅನೇಕ ಅನಾಹುತಗಳಿಗೆ ಕಾರಣವಾಗಿದೆ. ಲಕ್ನೋದಲ್ಲಿ ಶುಕ್ರವಾರ ಮನೆ ಕುಸಿದು 3 ಮಂದಿ ಸಾವನ್ನಪ್ಪಿದ್ದರು. ಜುಲೈ 18 ರಂದು ಎರಡು ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಬಿದ್ದು 9 ಮಂದಿ ಸಾವನ್ನಪ್ಪಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...