alex Certify
ಕನ್ನಡ ದುನಿಯಾ       Mobile App
       

Kannada Duniya

ಟೇಬಲ್ ಗೆ ಕಟ್ಟಿಹಾಕಿ ಶಾಲೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ

ರಾಜಸ್ತಾನದ ಬಾರ್ಮರ್ ನಲ್ಲಿರೋ ಸರ್ಕಾರಿ ಶಾಲೆಯಲ್ಲಿ ಘನಘೋರ ಕೃತ್ಯವೊಂದು ನಡೆದಿದೆ. 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಅಂತಾ ಆಕೆಯ ತಂದೆ ದೂರು ನೀಡಿದ್ದಾರೆ. ಶಾಲೆಯ ಶೌಚಾಲಯದ ಪಕ್ಕದಲ್ಲೇ ಇರುವ ಕೋಣೆಗೆ 2ನೇ ತರಗತಿ ಬಾಲಕಿಯನ್ನು ಕರೆದೊಯ್ದು ಟೇಬಲ್ ಗೆ ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ.

ಶಾಲೆಯಲ್ಲಿ ಕಸ ಗುಡಿಸುವ ಕೆಲಸ ಮಾಡ್ತಾ ಇದ್ದ ಇಬ್ಬರು ಈ ಕೃತ್ಯ ಎಸಗಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳನ್ನು ಬಂಧಿಸಿರೋ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗುಪ್ತಾಂಗಗಳಲ್ಲಿ ನೋವು ಕಾಣಿಸಿಕೊಂಡಿದೆ ಅಂತಾ ಬಾಲಕಿ ಹೆತ್ತವರ ಬಳಿ ಹೇಳಿದ್ದಳು.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು. ತಪಾಸಣೆ ನಡೆಸಿದ ವೈದ್ಯರು, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ತಿಳಿಸಿದ್ದರು. ಶಾಲಾ ಆವರಣದಲ್ಲಿ ಪೊಲೀಸರು ತಪಾಸಣೆ ನಡೆಸಿದ್ದು, ಆಡಳಿತ ಮಂಡಳಿಯ ಸಿಬ್ಬಂದಿಯನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...