alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಭದ್ರಕೋಟೆ ಮೇಲೆ ಬಿಜೆಪಿ ಕಣ್ಣು

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿ ಮೂರು ದಿನಗಳ ಬಳಿಕ ಕಾಂಗ್ರೆಸ್ ಭದ್ರಕೋಟೆ ಎಂದೇ ಪರಿಗಣಿಸಲಾಗಿರುವ ಅಮೇಥಿಗೆ ಬಿಜೆಪಿ ಪಡೆ ಭೇಟಿ ನೀಡಲಿದೆ. ಅಕ್ಟೋಬರ್ 9ರಂದು ಸಚಿವೆ ಸ್ಮೃತಿ ಇರಾನಿ ಅಮೇಥಿಗೆ ತೆರಳಲಿದ್ದಾರೆ. ಅಕ್ಟೋಬರ್ 10ರಂದು ಅಮಿತ್ ಶಾ ಅಮೇಥಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗ್ತಿದೆ.

ಅಮೇಥಿ ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ ಅಕ್ಟೋಬರ್ 10ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಸ್ಮೃತಿ ಇರಾನಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ಬಿಜೆಪಿ ಕಣ್ಣು ಸದ್ಯ ಅಮೇಥಿ ಮೇಲಿದೆ. ಅಮೇಥಿ ಕಾಂಗ್ರೆಸ್ ನ ಭಧ್ರಕೋಟೆ ಎಂದೇ ಪರಿಗಣಿಸಲಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಸ್ಪರ್ಧೆಗಿಳಿದಿದ್ದರು. ರಾಹುಲ್ ನಾಲ್ಕು ಲಕ್ಷದ 651 ಮತಗಳನ್ನು ಪಡೆದು ಸ್ಮೃತಿಯವರನ್ನು ಮಣಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...