alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಅಪಘಾತ: ಕೂದಲೆಳೆಯ ಅಂತರದಲ್ಲಿ ಪಾರಾದ ಸ್ಮೃತಿ ಇರಾನಿ

parliament_3c626b24-e307-11e5-a1fb-86e627e3731c

ಉತ್ತರ ಪ್ರದೇಶದ ಆಗ್ರಾದಿಂದ ದೆಹಲಿಗೆ ತೆರಳುತ್ತಿದ್ದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರ ಕಾರು ಯಮುನಾ ಎಕ್ಸ್‌‌‌‌ ಪ್ರೆಸ್ ವೇಯಲ್ಲಿ ಅಪಘಾತಕ್ಕೀಡಾಗಿದ್ದು, ಕೂದಲೆಳೆಯ ಅಂತರದಲ್ಲಿ ಸಚಿವರು ಪಾರಾಗಿದ್ದಾರೆ.

ಸಚಿವೆಯ ಬೆಂಗಾವಲು ಪಡೆ ವಾಹನದ ಮುಂದೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಓವರ್ ಟೇಕ್ ಮಾಡುವ ಭರದಲ್ಲಿ ಹೋಂಡಾ ಕಾರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತವಾಗಿದ್ದು, ಘಟನೆಯಲ್ಲಿ ಸಚಿವೆ ಸ್ಮೃತಿ ಇರಾನಿ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಲ್ಲದೇ ಈ ಅಪಘಾತದಲ್ಲಿ ಸ್ಮೃತಿ ಇರಾನಿ ಅವರ ಭದ್ರತಾ ಪಡೆಯ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೋಟಾರ್ ಬೈಕಿನಲ್ಲಿದ್ದ ವ್ಯಕ್ತಿ ರಮೇಶ್‌ ಕುಮಾರ್‌ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...