alex Certify
ಕನ್ನಡ ದುನಿಯಾ       Mobile App
       

Kannada Duniya

ಗೆಳತಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ಟೆಕ್ಕಿ

rape nmkop264

ಹೈದರಾಬಾದ್: ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ತನ್ನ ಅನಿವಾಸಿ ಭಾರತೀಯ ಗೆಳತಿ ಮೇಲೆಯೇ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು, ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹೈದರಾಬಾದ್ ನ ಗೋಲ್ಕಂಡ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಿಷ್ಣುವರ್ಧನ್ ಎಂಬ ಸಾಫ್ಟ್ ವೇರ್ ಇಂಜಿನಿಯರ್ ಬಂಜಾರ ಹಿಲ್ಸ್ ನಲ್ಲಿರುವ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅನಿವಾಸಿ ಭಾರತೀಯ ಟೆಕ್ಕಿ ಯುವತಿ ಜೊತೆ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದಾನೆ. ಕಳೆದ 6 ತಿಂಗಳಿಂದ ಅವರು ವಾಟ್ಸ್ ಆಪ್, ಫೇಸ್ ಬುಕ್ ನಲ್ಲಿ ಚಾಟಿಂಗ್ ಮಾಡುತ್ತಿದ್ದರು. ಈ ನಡುವೆ ಯುವತಿ ಅಮೆರಿಕಕ್ಕೆ ಹೋಗಲಿದ್ದು, ಇದನ್ನು ವಿಷ್ಣುವರ್ಧನ್ ಬಳಿ ಹೇಳಿಕೊಂಡಿದ್ದಳು. ಆಗ ಪಾರ್ಟಿ ಕೊಡಿಸುವುದಾಗಿ ವಿಷ್ಣುವರ್ಧನ್ ಕರೆಸಿಕೊಂಡಿದ್ದಾನೆ.

ಬೋಲಿ ಚೌಕಿಯಲ್ಲಿ ಡಿನ್ನರ್ ಪಾರ್ಟಿ ಮುಗಿಸಿ, ಗಿಫ್ಟ್ ಕೊಡುವುದಾಗಿ ಫ್ರೆಂಡ್ಸ್ ಕಾಲೋನಿಯಲ್ಲಿದ್ದ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಮತ್ತು ಬರುವ ಪಾನೀಯ ಕುಡಿಸಿ, ಆಕೆ ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ ಎಸಗಿದ್ದಾನೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...