alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಜೊತೆಗಿನ ಸಂಬಂಧದ ಬಗ್ಗೆ ಬಾಯ್ಬಿಟ್ಟ ಸರಿತಾ

saritha-with-oommen-chandy

ಕೊಚ್ಚಿ: ಸೋಲಾರ್ ಹಗರಣದ ಒಂದೊಂದೇ ಮಾಹಿತಿಗಳು ಹೊರಬೀಳುತ್ತಿದ್ದು, ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ಭಾಗಿಯಾಗಿದ್ದಾರೆ ಎನ್ನಲಾದ ಈ ಪ್ರಕರಣದ ತನಿಖೆ ಮುಂದುವರೆದಿದೆ. ಉಮ್ಮನ್ ಚಾಂಡಿ ಮತ್ತು ಅವರ ಸಂಪುಟ ಸದಸ್ಯರ ಮೇಲೆ ಎಫ್ಐಆರ್ ದಾಖಲಿಸುವಂತೆ ತ್ರಿಶೂರ್ ವಿಚಕ್ಷಣಾ ದಳದ ಕೋರ್ಟ್ ಆದೇಶಿಸಿತ್ತು.

ಹೀಗೆ ಆದೇಶ ನೀಡಿದ ಬೆನ್ನಲ್ಲೇ ನ್ಯಾಯಾಧೀಶರಾದ ಎಸ್. ಎಸ್. ವಾಸನ್ ಅವರು ತಮ್ಮ ನಿವೃತ್ತಿಯ ತೀರ್ಮಾನವನ್ನು ಪ್ರಕಟಿಸಿದ್ದು, ನಿವೃತ್ತಿ ಕೋರಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಸೋಲಾರ್ ಕಂಪನಿಯ ಮುಖ್ಯಸ್ಥೆ ಸರಿತಾ ಈ ಕುರಿತಂತೆ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಶಿವರಾಜನ್ ಆಯೋಗದ ಎದುರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು, ನವೀಕರಿಸಬಹುದಾದ ಇಂಧನ ಸಂಸ್ಥೆಯೊಂದನ್ನು ತಮ್ಮ ಕುಟುಂಬದ ಸದಸ್ಯರೊಂದಿಗೆ ಸ್ಥಾಪಿಸಲು ಸಿಎಂ ಹೇಳಿದ್ದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಿಎಂ ಉಮ್ಮನ್ ಚಾಂಡಿ ಅವರೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಆರೋಪವನ್ನು ನಿರಾಕರಿಸಿರುವ ಸರಿತಾ, ನನಗೆ ಅವರೊಂದಿಗೆ ಯಾವ ಸಂಬಂಧವೂ ಇರಲಿಲ್ಲ. ಅವರ ಮಗನೊಂದಿಗೆ ಕೇವಲ ವ್ಯಾವಹಾರಿಕ ಸಂಬಂಧ ಇತ್ತು ಎಂದು ವಿಚಾರಣೆಯ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...