alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಷುಲ್ಲಕ ಕಾರಣಕ್ಕೆ 6 ವರ್ಷದ ಮಗನನ್ನು ಬರ್ಬರವಾಗಿ ಕೊಂದ್ಲು ಮಹಾತಾಯಿ

ಪಂಜಾಬ್  ನ ಬಾಯಿಮತಿದಾಸ್ ನಗರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ತಾಯಿ 6 ವರ್ಷದ ಮಗನನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಸ್ನಾನ ಮಾಡಲು ಹಠ ಮಾಡಿದ ಮಗನನ್ನು ಬಾತ್ ರೂಮಿಗೆ ಕರೆದೊಯ್ದು ಮನಸ್ಸಿಗೆ ಬಂದಂತೆ ಥಳಿಸಿದ್ದಾಳೆ. ಶಸ್ತ್ರವೊಂದರಿಂದ ಮಗನಿಗೆ ಹೊಡೆದು ಕೊಲೆ ಮಾಡಿದ್ದಾಳೆ.

ಮಗ ಕಿರುಚಬಾರದೆಂದು ಆತನ ಬಾಯಿಗೆ ಬಟ್ಟೆ ತುರುಕಿದ್ದ ಮಹಿಳೆ ಮಗನಿಗೆ ಹೊಡೆದಿದ್ದಾಳೆ. ಮಗುವಿನ ಕರುಳು ಹೊರ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಿರ್ದಯವಾಗಿ ಮಗುವನ್ನು ಕೊಲೆ ಮಾಡಿದ್ದ ಮಹಿಳೆ ಬಾತ್ ರೂಮಿನಿಂದ ಹೊರ ಬಂದು ತಾನೇ ಮಗುವನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾಳೆ. ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಆಕೆ ಪಿಬಿ ಅಥವಾ ಖಿನ್ನತೆಯಿಂದ ಬಳಲುತ್ತಿರಲಿಲ್ಲವೆಂದು ಕುಟುಂಬಸ್ಥರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...