alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ತಾಯಿಯ ಶವವನ್ನು ಬೈಕ್ ನಲ್ಲಿ ಸಾಗಿಸಿದ ಪುತ್ರ

ತಾಯಿಯ ಕಳೇಬರವನ್ನ ಮಗನೊಬ್ಬ ಜಿಲ್ಲಾಸ್ಪತ್ರೆಗೆ ಬೈಕ್ ನಲ್ಲಿ ಸಾಗಿಸಿದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಹಾವು ಕಚ್ಚಿದ್ದರಿಂದ ಮಸ್ತಾಪುರ್ ನ ಕುನ್ವಾರ್ ಬಾಯ್ ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ ಶರೀರವನ್ನ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಬೇಕಿತ್ತು. ಆದ್ರೆ ಪೊಲೀಸರು ಮಾನವೀಯತೆ ಮರೆತವರಂತೆ ಮಗನಿಗೆ ತಾಯಿಯ ಕಳೇಬರವನ್ನು ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದರು.

ಅಂಬುಲೆನ್ಸ್ ಸೇವೆ ಕೂಡ ದೊರಕದ ಹಿನ್ನಲೆಯಲ್ಲಿ ಸಂಬಂಧಿಯ ಸಹಕಾರದೊಂದಿಗೆ ರಾಜೇಶ್, ತಾಯಿಯ ಮೃತದೇಹವನ್ನು ಬೈಕ್ ನಲ್ಲಿ 35 ಕಿಲೋ ಮೀಟರ್ ದೂರವಿದ್ದ ಜಿಲ್ಲಾಸ್ಪತ್ರೆಗೆ ಕೊಂಡೊಯ್ದಿದ್ದಾನೆ.

ಹಾವು ಕಡಿತಕ್ಕೆ ಒಳಗಾದ ಮಹಿಳೆಯನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರೆ ಆಕೆ ಬದುಕುಳಿಯುವ ಸಾಧ್ಯತೆ ಇತ್ತು. ಆದ್ರೆ ರಾಜೇಶ್ ಆಕೆಯನ್ನ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗೋದಕ್ಕೆ ನಿರ್ಧರಿಸಿದ. ಆಸ್ಪತ್ರೆಗೆ ಕರೆ ತರೋದಕ್ಕೆ ವಿಳಂಬವಾದ ಹಿನ್ನಲೆಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಅಂತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...