alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ಪ್ರಚಾರ ನಡೆಸಲಿದ್ದಾರೆ ಮೇಡಂ

sonia-1

ಉತ್ತರ ಪ್ರದೇಶ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ. ಫೆಬ್ರವರಿ 20 ರಂದು ರಾಯ್ಬರೇಲಿಯಲ್ಲಿ ಸೋನಿಯಾ ಗಾಂಧಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ನನ್ನ ಕ್ಷೇತ್ರದಲ್ಲಿ ನಾನು ಮತಯಾಚನೆ ಮಾಡಲಿದ್ದೇನೆಂದು ಸೋನಿಯಾ ತಿಳಿಸಿದ್ದಾರೆ. ಅನೇಕ ತಿಂಗಳುಗಳಿಂದ ಸೋನಿಯಾ ಎಲ್ಲಿಯೂ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಅನಾರೋಗ್ಯದಿಂದ ಬಳಲುತ್ತಿರುವ ಅವರು ವಿಶ್ರಾಂತಿಯಲ್ಲಿದ್ದರು.

ಆಗಸ್ಟ್ 2016 ರಲ್ಲಿ ವಾರಣಾಸಿಯಲ್ಲಿ ಪ್ರಚಾರ ರ್ಯಾಲಿ ನಡೆಸುವ ವೇಳೆ ಸೋನಿಯಾ ಗಾಂಧಿ ಆರೋಗ್ಯ ಹದಗೆಟ್ಟಿತ್ತು. ಜ್ವರ, ಕಡಿಮೆ ರಕ್ತದೊತ್ತಡ, ಡಿಹೈಡ್ರೇಷನ್ ನಿಂದ ಬಳಲಿದ್ದರು. ಉತ್ತರ ಪ್ರದೇಶ ಚುನಾವಣೆಯ ಮೊದಲ ಹಂತದ ಚುನಾವಣೆಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 11 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಪಕ್ಷಗಳ ನಾಯಕರು ಮತದಾರರನ್ನು ಒಲಿಸಿಕೊಳ್ಳುವ ಕಸರತ್ತಿನಲ್ಲಿ ನಿರತರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...