alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಪ್ರಮುಖ ನಾಯಕರ ಜೊತೆ ಸೋನಿಯಾ, ರಾಹುಲ್ ಚರ್ಚೆ

ರಾಜ್ಯದಲ್ಲಿ ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೆಹಲಿಯಿಂದ ಆಗಮಿಸಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಿಲ್ಟನ್ ಹೋಟೆಲ್ ಗೆ ತೆರಳಿ ಅಲ್ಲಿ ತಂಗಿದ್ದ ನೂತನ ಕಾಂಗ್ರೆಸ್ ಶಾಸಕರನ್ನು ಅಭಿನಂದಿಸಿದ್ದರು.

ಅದಾದ ನಂತರ ವಿಧಾನಸೌಧಕ್ಕೆ ತೆರಳಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ, ಬಳಿಕ ಪಕ್ಷದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.

ಅದರಲ್ಲೂ ಕಷ್ಟಕಾಲದಲ್ಲಿ ಪಕ್ಷದ ನೆರವಿಗೆ ನಿಂತ ಡಿ.ಕೆ. ಶಿವಕುಮಾರ್ ಅವರ ಅಸಮಾಧಾನದ ಕುರಿತಂತೆ ಮಾತುಕತೆ ನಡೆದಿದೆ ಎನ್ನಲಾಗಿದ್ದು,
ಶಿವಕುಮಾರ್ ಅವರ ಬೆಂಬಲಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮೊದಲಾದವರು ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಕಷ್ಟ ಕಾಲದಲ್ಲಿ ಪಕ್ಷದ ನೆರವಿಗೆ ಬಂದ ಡಿಕೆಶಿ ಸಹೋದರ ಅಹವಾಲನ್ನು ಆಲಿಸಿದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನದ ಭರವಸೆಯನ್ನು ನೀಡಿದ್ದಾರೆಂದು ತಿಳಿದುಬಂದಿದ್ದು, ಜಿ. ಪರಮೇಶ್ವರ್ ಅವರ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕಗೊಳ್ಳುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನ ಉನ್ನತ ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...