alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಮಾಜವಾದಿ ಪಕ್ಷಕ್ಕೆ ನಾನೇ ಅಧ್ಯಕ್ಷ’

mulaya

ಲಖ್ನೋ: ಸಮಾಜವಾದಿ ಪಕ್ಷದ ಆಂತರಿಕ ಕಲಹ ತಾರಕಕ್ಕೇರಿದ್ದು, ಪಕ್ಷದ ಚಿಹ್ನೆ ತಮಗೆ ಸೇರಿದ್ದೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಣ ಚುನಾವಣಾ ಆಯೋಗಕ್ಕೆ ದಾಖಲೆ ಪತ್ರಗಳನ್ನು ಸಲ್ಲಿಸಿದೆ.

ಇದರ ಬೆನ್ನಲ್ಲೇ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಸುದ್ದಿಗೋಷ್ಠಿ ನಡೆಸಿದ್ದು, ಸಮಾಜವಾದಿ ಪಕ್ಷಕ್ಕೆ ನಾನೇ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳಿದ್ದಾರೆ.

ಶಿವಪಾಲ್ ಯಾದವ್ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದ ಅವರು, ಅಖಿಲೇಶ್ ಯಾದವ್ ಹಾಗೂ ರಾಮಗೋಪಾಲ್ ಯಾದವ್ ವಿರುದ್ಧ ಕಿಡಿಕಾರಿದ್ದಾರೆ.

ಈಗಾಗಲೇ ಪಕ್ಷದಿಂದ ರಾಮಗೋಪಾಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಅವರಿಗೆ ರಾಷ್ಟ್ರೀಯ ಕಾರ್ಯಕಾರಿಣಿ ಕರೆಯುವ ಅಧಿಕಾರ ಇಲ್ಲ ಎಂದು ತಿಳಿಸಿದ್ದಾರೆ.

ಪಕ್ಷಕ್ಕೆ ನಾನು ಅಧ್ಯಕ್ಷ, ಶಿವಪಾಲ್ ರಾಜ್ಯಾಧ್ಯಕ್ಷ ಹಾಗೂ ಅಖಿಲೇಶ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ. ರಾಮಗೋಪಾಲ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...