alex Certify
ಕನ್ನಡ ದುನಿಯಾ       Mobile App
       

Kannada Duniya

ಗುಜರಾತಿನಲ್ಲಿಂದು ಮೋದಿ ವರ್ಸಸ್ ರಾಹುಲ್

ಗುಜರಾತ್ ಚುನಾವಣಾ ಕಣ ರಂಗೇರಿದೆ. ಇಂದು ಗುಜರಾತ್ ನಲ್ಲಿ ಮೆಗಾ ರ್ಯಾಲಿ ನಡೆಯುತ್ತಿದೆ. ಇಬ್ಬರು ದಿಗ್ಗಜರು ಇಂದು ಪ್ರಚಾರ ಕಣಕ್ಕೆ ಧುಮುಕಿದ್ದಾರೆ. ಒಂದು ಕಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯಾದ್ರೆ ಇನ್ನೊಂದು ಕಡೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ನಾಲ್ಕು ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇತ್ತ ರಾಹುಲ್ ಗಾಂಧಿ, ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ತಮ್ಮ ಎರಡು ದಿನಗಳ ಗುಜರಾತ್ ಪ್ರವಾಸವನ್ನು ಶುರುಮಾಡಲಿದ್ದಾರೆ.

ವಿಶೇಷವೆಂದ್ರೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ರಾಹುಲ್ ಗಾಂಧಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮನಾಥ ಮಂದಿರದಿಂದ ಸ್ವಲ್ಪವೇ ದೂರದಲ್ಲಿರುವ ಹಳ್ಳಿಯೊಂದರಲ್ಲಿ ಅದೇ ವೇಳೆ ಮೋದಿ ಭಾಷಣ ಮಾಡಲಿದ್ದಾರೆ. ಈಗಾಗಲೇ ನರೇಂದ್ರ ಮೋದಿ ಪ್ರಚಾರ ರ್ಯಾಲಿ ಶುರುವಾಗಿದೆ. ರಾಹುಲ್ ಗಾಂಧಿ 1 ಗಂಟೆ ನಂತ್ರ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...