alex Certify
ಕನ್ನಡ ದುನಿಯಾ       Mobile App
       

Kannada Duniya

ಚೆನ್ನೈನ ಕಾವೇರಿ ಆಸ್ಪತ್ರೆ ಮುಂದೆ ಮುಗಿಲು ಮುಟ್ಟಿದ ಕರುಣಾನಿಧಿ ಅಭಿಮಾನಿಗಳ ರೋದನ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಕರುಣಾನಿಧಿ ಇಂದು ಸಂಜೆ ವಿಧಿವಶರಾಗಿದ್ದಾರೆ. ಕಳೆದ 12 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರು ನಿಧನರಾದ ಸುದ್ದಿ ಹೊರಬೀಳುತ್ತಿದ್ದಂತೆ ಅಭಿಮಾನಿಗಳ ರೋಧನ ಮುಗಿಲು ಮುಟ್ಟಿದೆ.

ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕರುಣಾನಿಧಿಯವರು ಚೆನ್ನೈನ ತಮ್ಮ ಗೋಪಾಲಪುರಂ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರಾದರೂ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಕುಟುಂಬ ಸದಸ್ಯರು ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಿದ್ದರು.

ಚಿಕಿತ್ಸೆಗೆ ಕರುಣಾನಿಧಿ ಸ್ಪಂದಿಸುತ್ತಿದ್ದಾರೆ ಹಾಗೂ ಇನ್ನೆರಡು ದಿನಗಳಲ್ಲಿ ಅವರು ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದ್ದರ ಮಧ್ಯೆ ಇಂದು ಸಂಜೆ ಬಂದೆರಗಿದ ಈ ಆಘಾತಕಾರಿ ಸುದ್ದಿ ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ.

ಕರುಣಾನಿಧಿ ಅವರ ಅಕಾಲಿಕ ಸಾವಿನಿಂದ ಆಘಾತಗೊಂಡಿರುವ ಅಭಿಮಾನಿಗಳ ಶೋಕ ಮುಗಿಲುಮುಟ್ಟಿದ್ದು, ಕಾವೇರಿ ಆಸ್ಪತ್ರೆ ಮುಂದೆ ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...