alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! ಮಗುವಿಗೆ ಚಾಕುವಿನಿಂದ ಬರೆ ಹಾಕಿದ ಮಲತಾಯಿ

ಏಳು ವರ್ಷದ ಬಾಲಕಿಯೊಬ್ಬಳಿಗೆ ಮಲತಾಯಿ ಚಾಕುವಿನಿಂದ ಬರೆ ಹಾಕಿರುವ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಕಳೆದ ವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ಶಾಲೆಗೆ ತೆರಳಿದ್ದ ವೇಳೆ ಶಿಕ್ಷಕರಿಂದ ಈ ವಿಚಾರ ಬೆಳಕಿಗೆ ಬಂದಿದೆ.

ಬಾಲಕಿ ಶಾಲೆಯಲ್ಲಿ ವಿಚಿತ್ರ ಸಂಕಟ ಎದುರಿಸುತ್ತಿದ್ದಳು. ಇದನ್ನು ಗಮನಿಸಿದ ಶಾಲೆಯ ಶಿಕ್ಷಕರು ಆಕೆಯನ್ನ ಕರೆದು ಮಾತನಾಡಿದ್ದಾರೆ. ಆ ಸಂದರ್ಭದಲ್ಲಿ ಬಾಲಕಿ ತನ್ನ ಮೈಮೇಲಿದ್ದ ಬರೆಗಳನ್ನ ತೋರಿಸಿ ನಿದ್ದೆಯಲ್ಲಿ ಹಾಸಿಗೆ ಒದ್ದೆ ಮಾಡಿದ ತಪ್ಪಿಗೆ ತನ್ನ ಮಲತಾಯಿ ಬರೆ ಹಾಕಿದ್ದಾಗಿ ಹೇಳಿಕೊಂಡಿದ್ದಾಳೆ. ಬಾಲಕಿಯ ಹೊಟ್ಟೆ, ತೊಡೆ, ಮತ್ತು ಗುಪ್ತಾಂಗಕ್ಕೆ ಬರೆಯನ್ನ ಹಾಕಿದ್ದಾಳೆ ಆ ಮಹಾತಾಯಿ.

ಕೂಡಲೇ ಶಾಲೆಯ ಶಿಕ್ಷಕರು ಮಕ್ಕಳ ಹೆಲ್ಪ್ ಲೈನ್ ಗೆ ಮತ್ತು ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯಿಂದ ಹೇಳಿಕೆ ಪಡೆದು ತಂದೆ ಮತ್ತು ತಾಯಿಯನ್ನ ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಪ್ರಕಾರ ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...